ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
KPSC ಸದಸ್ಯತ್ವ ಕೊಡಿಸುವುದಾಗಿ ತಮ್ಮನ್ನು ನಂಬಿಸಿ 4.3 ಕೋಟಿ ರೂಪಾಯಿ ಪಡೆದುಕೊಂಡು ವಂಚಿಸಲಾಗಿದೆ ಎಂದು ನೀಲಮ್ಮ ಎಂಬವರು ನೀಡಿದ ದೂರನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
ಬಂಧಿತರನ್ನು ತಾವರೆಕರೆಯ ಭುವನಪ್ಪ ಲೇಔಟ್ ನ ರಿಯಾಜ್ ಅಹ್ಮದ್ (41 ವರ್ಷ) ಮಲ್ಲೇಶ್ವರಂನ ಯೂಸುಫ್ ಸುದ್ದಿಕಟ್ಟಿ (47 ವರ್ಷ), ಮೂಡಿಗೆರೆಯ ಚಂದ್ರಪ್ಪ ಸಿ (44 ವರ್ಷ) ಕನಕಪುರ ತಾಲ್ಲೂಕಿನಸಮೀಪದ ಉಯ್ಯಂಬಳ್ಳಿಯ ರುದ್ರೇಶ್ (35 ವರ್ಷ) ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಇನ್ನೂ ಕೆಲವು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.