ಬೆಂಗಳೂರು: ಕೆಆರ್‌ಐಡಿಎಲ್ ನಿಮದ ಕಾಮಗಾರಿ ನಡೆಸಿದ್ದ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ ಕುರಿತಂತೆ ಉನ್ನತ ಮಟ್ಟದ ತನಿಖೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆದೇಶಿಸಿದ್ದಾರೆ.
ಸಂತೆಬೆನ್ನೂರಿನ ಗುತ್ತಿಗೆದಾರ ಪಿ.ಎಸ್. ಗೌಡರ್ ಆತ್ಮಹತ್ಯೆ ಬಗ್ಗೆ ಪ್ರಕರಣದ ಇಲಾಖಾ ತನಿಖೆಗೆ ಸಚಿವ ಪ್ರಿಯಾಂಕ್ ಖರ್ಗೆ ಆದೇಶಿಸಿದ್ದಾರೆ ಎಂದು ಕಚೇರಿ ಮೂಲಗಳು ತಿಳಿಸಿವೆ. ಕೃಷಿ ಇಲಾಖೆ ಕಾಮಗಾರಿ ನಡೆಸಿದ್ದರೂ ಹಣ ಬಿಡುಗಡೆ ಮಾಡದೆ ಕೆಆರ್‌ಐಡಿಎಲ್ ಅಧಿಕಾರಿಗಳು ಸತಾಯಿಸಿದ್ದಾರೆ ಎಂದು ಗುತ್ತಿಗೆದಾರ ಪಿ.ಎಸ್. ಗೌಡರ್ ತಮ್ಮ ಮರಣಪತ್ರದಲ್ಲಿ ಬರೆದಿಟ್ಟಿದ್ದರು ಎನ್ನಲಾಗಿದೆ. ಈ ಪ್ರಕರಣವನ್ನು ಮುಂದಿಟ್ಟು ಪ್ರತಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ದ ಹೋರಾಟ ಆರಂಭಿಸಿದೆ.
ಈ ನಡುವೆ, ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಪ್ರಕರಣ ಸಂಬಂಧ ತನಿಖೆ ನಡೆಸಲು ಹಿರಿಯ ಅಧಿಕಾರಿಗಳ ಸಮಿತಿ ರಚಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.







































































