ಮೈಸೂರು: ಕೃಷ್ಣರಾಜ ಸಾಗರ ಡ್ಯಾಮ್ ಬಳಿ ಇಂದು ಮುಂಜಾನೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಂಪತಿ ಸಮೇತ ಕಾವೇರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.
ನಂತರ ದಸರಾ ಉದ್ಘಾಟನೆಗಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್, ಬೈರತಿ ಬಸವರಾಜ್, ಸುನಿಲ್ ಕುಮಾರ, ಶಾಸಕ ಅರವಿಂದ ಬೆಲ್ಲದ ಮತ್ತು ಇತರರು ಉಪಸ್ಥಿತರಿದ್ದರು.