ಗುರುಗ್ರಾಮ್ (ಹರಿಯಾಣ): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಇದೀಗ ಮತ್ತೊಂದು ಪ್ರತಿಷ್ಠಿತ ರಾಷ್ಡ್ರೀಯ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕೇಂದ್ರ ವಸತಿ ಮತ್ರು ನಗರಾಭಿವೃದ್ಧಿ ಸಚಿವಾಲಯದ Award of Excellence in Urban Transport ಪುರಸ್ಕಾರ 2025ರ ಪ್ರತಿಷ್ಠೆಯ ಗೌರವವೆನಿಸಿದೆ.
THE STATE, WHICH HAS IMPLEMENTED BEST URBAN TRANSPORT PROJECTS DURING THE PREVIOUS YEAR ವರ್ಗದಲ್ಲಿ ನಿಗಮದ ಮೈಸೂರು ನಗರ ಸಾರಿಗೆಯ ಧ್ವನಿಸ್ಪಂದನ ಉಪಕ್ರಮಕ್ಕೆ ಭಾರತ ಸರ್ಕಾರದ ಪ್ರಶಸ್ತಿ ಲಭಿಸಿದೆ
ಕೆಎಸ್‌ಆರ್‌ಟಿಸಿಯ ಮೈಸೂರು ನಗರ ಸಾರಿಗೆಯ 200 ಬಸ್ಸುಗಳಲ್ಲಿ ಧ್ವನಿ ಸ್ಪಂದನ’ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್ ಎಂಬ ದೇಶದ ಮೊದಲ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತರಲಾಗಿದೆ. ದೃಷ್ಟಿ ವಿಕಲ ಚೇತನ ಪ್ರಯಾಣಿಕರ ಪ್ರಯಾಣ ಸುಲಭವಾಗಿದ್ದು, ಅವರ ಆತ್ಮವಿಶ್ವಾಸ, ಭದ್ರತೆ ಮತ್ತು ಸಂಚಾರದ ಸ್ವಾತಂತ್ರ್ಯದಲ್ಲಿ ದೊಡ್ಡ ಮಟ್ಟದ ಬದಲಾವಣೆಗೆ ಕಾರಣವಾಗಿದೆ.
ಈ ಪ್ರಶಸ್ತಿಯನ್ನು ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಮತ್ತುರಾಜ್ಯ ಸಚಿವ ತೋಕನ್ ಸಾಹು ಅವರು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಅವರಿಗೆ ಪ್ರದಾನ ಮಾಡಿದರು.
ಏನಿದು ಧ್ವನಿಸ್ಪಂದನ?
ಧ್ವನಿ ಸ್ಪಂದನ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್, ಐಐಟಿ ದೆಹಲಿಯ ರೈಸ್ಡ್ ಲೈನ್ಸ್ ಫೌಂಡೇಶನ್ ಅಭಿವೃದ್ಧಿಪಡಿಸಿರುವ ತಂತ್ರಜ್ಞಾನವಾಗಿದ್ದು, ಜರ್ಮನಿಯ GEZ ಸಂಸ್ಥೆಯ ಸಹಕಾರದೊಂದಿಗೆ ದೃಷ್ಟಿವಿಕಲ ಚೇತನ ಬಸ್ ಬಳಕೆದಾರರಿಗೆ ಬಸ್‌ಗಳನ್ನು ಗುರುತಿಸಲು ಹಾಗೂ ಧ್ವನಿ ಆಧಾರಿತ ಸೂಚನೆಗಳ ಮೂಲಕ ಬಸ್ ಪ್ರವೇಶದ ಸ್ಥಳವನ್ನು ಸುರಕ್ಷಿತವಾಗಿ ಕಂಡುಹಿಡಿಯಲು ಸಹಾಯ ಮಾಡುತ್ತದೆ. 400ಕ್ಕೂ ಹೆಚ್ಚು ದೃಷ್ಟಿ ವಿಕಲ ಚೇತನ ಬಳಕೆದಾರರಿಗೆ ಇದರ ಬಳಕೆಯ ಕುರಿತು ತರಬೇತಿ ನೀಡಲಾಗಿದೆ.
ಸರ್ಕಾರ, ಶಿಕ್ಷಣ ಸಂಸ್ಥೆ, ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿದೆ ಜಾರಿಗೆ ತಂದಿರುವ ದೇಶದ ಮಾದರಿ ಉಪಕ್ರಮವಾಗಿದೆ ಎಂಬ ಹೆಗ್ಗಳಿಕೆ ಇದು ಪಾತ್ರವಾಗಿದೆ.



























































