ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ನೌಕರರ ಅವಲಂಭಿತರಿಗೆ ಅಪಘಾತ ಪರಿಹಾರ ವಿಮೆ ರೂ.1 ಕೋಟಿ ಹಾಗೂ ಇತರೆ ಕಾರಣಗಳಿಂದ ಮೃತಪಟ್ಟ (ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಇತ್ಯಾದಿ) 16 ನೌಕರರ ಕುಟುಂಬದವರಿಗೆ ಮೊದಲ ಬಾರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಹಣ 10 ಲಕ್ಷ ಹಸ್ತಾಂತರ..
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ತನ್ನ ಸಿಬ್ಬಂದಿಗಳ ಅವಲಂಭಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟ ಅಥವಾ ಅಂಗನ್ಯೂನತೆಗೆ ಒಳಗಾದಲ್ಲಿ ರೂ.1 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸುವ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತಂದಿದೆ.
ಈ ವಿಮಾ ಯೋಜನೆ ಜಾರಿಯಲ್ಲಿ ಪ್ರಮುಖ ಪಾತ್ರವಹಿಸಿರುವ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಅವರು, ಸಾರಿಗೆ ಸಂಸ್ಥೆಯ ಸಿಬ್ಬಂದಿಗಳ ಅವಲಂಬಿತರನ್ನು ಭೇಟಿ ಮಾಡಿ ಸಂತ್ವನ ಹೇಳಿದರು. ಕೆಎಸ್ಸಾರ್ಟಿಸಿ ನಿಗಮವು ಎರಡು ತಿಂಗಳ ಹಿಂದಷ್ಟೇ ಪರಿಹಾರ ಮೊತ್ತವನ್ನು ರೂ.3 ಲಕ್ಷದಿಂದ ರೂ.10 ಲಕ್ಷಗಳಿಗೆ ಏರಿಕೆ ಮಾಡಿದ್ದು, ಇದರಿಂದ ಇಂದು 16 ಕುಟುಂಬಗಳಿಗೆ ಆರ್ಥಿಕವಾಗಿ ಸ್ವಲ್ಪ ಹೆಚ್ಚು ಹಣ ದೊರೆಯುವಂತಾಗಿದೆ ಎಂದರು, ಜೀವಕ್ಕೆ ಬೆಲೆ ಕಟ್ಟುವುದು ಸಾಧ್ಯವಿಲ್ಲ, ಆದರೂ ಪರಿಹಾರ ಮೊತ್ತವನ್ನು ಸದುಪಯೋಗ ಪಡಿಸಿಕೊಂಡು ಸುಸೂತ್ರ ಜೀವನ ನಿರ್ವಹಣೆ ಮಾಡುವಂತೆ ತಿಳಿಸಿ ಎಲ್ಲರಿಗೂ ಧೈರ್ಯ ತಂಬಿದರು..
ಈ ಯೋಜನೆ ಜಾರಿಯಾದ ನಂತರ 17 ನೌಕರರು ವೈಯಕ್ತಿಕ, ಕರ್ತವ್ಯ ನಿರತರಾದ ಸಂದರ್ಭದಲ್ಲಿ ಅಪಘಾತದಲ್ಲಿ ಮೃತಪಟ್ಟಿರುತ್ತಾರೆ. ಈ ವರೆಗೂ 12 ಮಂದಿ ನೌಕರರ ಕುಟುಂಬದವರಿಗೆ ತಲಾ 1 ಕೋಟಿ ರೂಪಾಯಿ ಅಪಘಾತ ವಿಮಾ ಮೊತ್ತವನ್ನು ವಿತರಿಸಲಾಗಿದೆ
ನೌಕರರ ಕುಟುಂಬಗಳಿಗೂ ಬದುಕಿಗೂ ‘ಶಕ್ತಿ’
ರಾಜೇಶ್ ಡಿ.ಸಿ, ಚಾಲಕ-ಕಂ-ನಿರ್ವಾಹಕ, ಬಿಲ್ಲೆ ಸಂಖ್ಯೆ: 1447, ಅರಕಲಗೂಡು ಘಟಕ, ಹಾಸನ ವಿಭಾಗ, ಇವರು 29.07.2023 ರಂದು ಮೃತಪಟ್ಟಿರದ್ದು. ಮೃತರ ಅವಲಂಭಿತರಿಗೆ 1 ಕೋಟಿ ರೂಪಾಯಿ ಅಪಘಾತ ಪರಿಹಾರ ವಿಮಾ ಜೊತೆಗೆ, ಉಪಧನ, ಭವಿಷ್ಯ ನಿಧಿ, ನೌಕರರ ಕುಟುಂಬ ಕಲ್ಯಾಣ ಯೋಜನೆ, ಡಿಆರ್ಬಿಎಫ್ ಹಾಗೂ ಗಂಪು ವಿಮಾ ಯೋಜನೆಯಿಂದ 14,19,980 ರೂಪಾಯಿ ಪರಿಹಾರವನ್ನು ನೀಡಲಾಯಿತು.
ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮರಣವನ್ನಪ್ಪುವ ನೌಕರರ ಸಂಖ್ಯೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವ ವಿಷಯವನ್ನು ಮನಗಂಡು, ಈ ಕಾರಣದಿಂದ ಮೃತರಾಗುವ ಕುಟುಂಬದ ಅವಲಂಭಿತರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ಅವರಿಗೆ ನೆರವಾಗಲು ಹೆಚ್ಚಿನ ಮೊತ್ತದ ಪರಿಹಾರವನ್ನು ನೀಡುವ ಸದುದ್ದೇಶದಿಂದ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳಿಂದ ಬೇಡಿಕೆ ಬಂದ ಹಿನ್ನಲೆಯಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡಲಾಗುತ್ತಿದ್ದ ಪರಿಹಾರ ಮೊತ್ತವಾದ ರೂ. 3 ಲಕ್ಷಗಳನ್ನು 01.11.2023 ಜಾರಿಗೆ ಬರುವಂತೆ10 ಲಕ್ಷ ರೂಪಾಯಿಗಳಿಗೆ ಪರಿಹಾರ ಮೊತ್ತವನ್ನು ಹೆಚ್ಚಿಸಿ ಮುಂದುವರೆದ ಮರಣ ಪ್ರಕರಣಗಳಿಗೆ ಅನ್ವಯವಾಗುವಂತೆ ಜಾರಿಗೆ ತರಲಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿಗಮದ ಕುಟುಂಬ ಕಲ್ಯಾಣ ಪರಿಹಾರ ಯೋಜನೆ ಅಡಿಯಲ್ಲಿ ಕಳೆದ ನವೆಂಬರ್ 2023 ಮತ್ತು ಡಿಸೆಂಬರ್ 2023 ರ ಮಾಹೆಗಳಲ್ಲಿ ಮರಣ ಹೊಂದಿದ 16 ಸಿಬ್ಬಂದಿಗಳ ಅರ್ಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರಿಗೆ ತಲಾ ರೂ.10.00 ಲಕ್ಷಗಳ ಪರಿಹಾರದ ಚೆಕ್ ವಿತರಿಸಲಾಯಿತು.
ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಸ್.ಆರ್. ಶ್ರೀನಿವಾಸ್ (ವಾಸು) ಅವರು ಕೇಂದ್ರ ಕಛೇರಿಯಲ್ಲಿ ನಿಗಮದ ಸೇವೆಯಲ್ಲಿರುವಾಗ ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಅವಲಂಭಿತರಿಗೆ 1 ಕೋಟಿ ರೂಪಾಯಿ ಪರಿಹಾರ ಮೊತ್ತದ ಚೆಕ್ಕನ್ನು ಹಾಗೂ ಇತರೆ ಕಾರಣಗಳಿಂದ ಮೃತಪಟ್ಟಿದ್ದ 16 ಸಿಬ್ಬಂದಿಗಳ ಅವಲಂಭಿತರಿಗೆ ಕುಟುಂಬ ಕಲ್ಯಾಣ ಯೋಜನೆಯಡಿ ತಲಾ10 ಲಕ್ಷ ರೂಪಾಯಿ ಹಾಗೂ ಅವರಿಗೆ ನಿಗಮದಿಂದ ಪಾವತಿಸಬೇಕಾದ ಭವಿಷ್ಯನಿಧಿ, ಉಪದನ ಚೆಕ್ಕನ್ನು ವಿತರಿಸಿದರು.
ಇದೇ ವೇಳೆ, ಮಾತನಾಡಿದ KSRTC ನಿಗಮದ ಅಧ್ಯಕ್ಷರಾದ ಎಸ್.ಆರ್.ಶ್ರೀನಿವಾಸ್, KSRTCಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಅತೀ ಶ್ರಮ ಜೀವಿಗಳಾಗಿದ್ದು, ನಿಗಮವು ಅವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿರುವುದು ಪ್ರಶಂಸಾರ್ಹ ಎಂದರು.
ಈ ಯೋಜನೆಗಳ ಅನುಷಾನಕ್ಕಾಗಿ ಸಾರಿಗೆ ಸಚಿವರನ್ನು ಹಾಗೂ ಆಡಳಿತ ಮಂಡಳಿಯನ್ನು ಅವರು ಅಭಿನಂದಿಸಿದರು. ತಮಗೆ ದೊರೆತಿರುವ ಪರಿಹಾರ ಹಣವನ್ನು ಯಾರಿಗೂ ಕೊಡದೇ ಮುಂದಿನ ಜೀವನ ನಿರ್ವಹಣೆಗಾಗಿ ಸೂಕ್ತವಾಗಿ ವಿನಿಯೋಗಿಸಿ ಕಾಪಾಡಿಕೊಳ್ಳುವಂತೆ ಹಾಗೂ ಅವಲಂಭಿತರಲ್ಲಿ ನೌಕರಿಗೆ ಅರ್ಹರಿರುವವರಿಗೆ ಕಾಲವಿಳಂಬವಿಲ್ಲದೇ ನೌಕರಿಯನ್ನು ಒದಗಿಸಲು ಕ್ರಮ ಜರುಗಿಸಲು ತಿಳಿಸಿ ಎಲ್ಲರಿಗೂ ಶುಭ ಹಾರೈಸಿ, ಕಾರ್ಮಿಕ ಪರವಾದ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಹಮ್ಮಿಕೊಂಡು ಅನುಷ್ಠಾನಗೊಳಿಸುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ KSRTC ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ನಿರ್ದೇಶಕರಾದ (ಸಿಬ್ಬಂದಿ ಮಾತ್ತು ಜಾಗೃತ) ಡಾ.ನಂದಿನಿದೇವಿ ಹಾಗೂ ಕಾರ್ಮಿಕ ಸಂಘಟನೆಗಳ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು. .





























































