ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಸಂಸ್ಥೆ ನೌಕರರ ಮುಷ್ಕರ ಎರಡನೇ ದಿನವೂ ಮುಂದುವರರದಿದ್ದು ಅವಾಂತರ ಸೃಷ್ಟಿಯಾಗಿದೆ.
ಕಳೆದ ಡಿಸೆಂಬರ್ ತಿಂಗಳಿನಲ್ಲಿ ನಾಲ್ಕು ದಿನಗಳ ಕಾಲ ಮುಷ್ಕರ ನಡೆಸಿದ್ದ ಇದೀಗ ಮತ್ತೆ ಮುಂದುವರಿದಿದೆ.
ಮಂಗಳವಾರದಿಂದ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದು ಇದರಿಂದಾಗಿ ಸಾರಿಗೆ ಬಸ್‌ಗಳು ಇಂದು ಕೂಡಾ ಸಂಚರಿಸಿಲ್ಲ. ಅಲ್ಲೊಂದು ಇಲ್ಲೊಂದು ಸಾರಿಗೆ ಬಸ್‌ಗಳು ಕಂಡುಬಂದರೂ ಸಾರ್ವಜನಿಕ ಸೇವೆ ಜನರಿಗೆ ಸಮರ್ಪಕವಾಗಿ ಸಿಕ್ಕಿಲ್ಲ.
ಈ ನಡುವೆ ಖಾಸಗಿ ಬಸ್‌ಗಳ ಸೇವೆ ಸಿಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಿದೆಯಾದರೂ ದುಬಾರಿ ಹಣ ವಸೂಲಿಯಿಂದ ಜನ ಕಂಗಾಲಾಗಿದ್ದಾರೆ. ನೊಂದ ಜನರು ಸರ್ಕಾರದ ಹಾಗೂ ವ್ಯವಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.







































































