ಗದಗ: ಕೆಎಸ್ಸಾರ್ಟಿಸಿ ಸಹಿತ ಸಾರಿಗೆ ಸಂಸ್ಥೆಯ ಸಿಬ್ಬಂದಿ ವರ್ಗದ ಬಹುದಿಗಳ ವೇತನ ಹೆಚ್ಚಳದ ಬೇಡಿಕೆ ಈಡೇರಿಸುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ.
ಗದಗ್ ಜಿಲ್ಲೆ ಶಿರಹಟ್ಟಿಯಲ್ಲಿ ನೂತನ ಸಾರಿಗೆ ಘಟಕ ಉದ್ಘಾಟನೆ ಸಮಾರಂಭದಲ್ಲಿ ವಾಯುವ್ಯ ಸಾರಿಗೆ ನಿಗಮದ ಒಂಬತ್ತು ವಿಭಾಗಗಳ ಅಪಘಾತ ರಹಿತ ಚಾಲಕರಿಗೆ ಬಂಗಾರ, ಬೆಳ್ಳಿ ಪದಕಗಳನ್ನು ಸಚಿವರು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್‌ನಲ್ಲಿ ಸಾರಿಗೆ ನಿಗಮಗಳ ನೌಕೃ ವೇತನ ಪರಿಷ್ಕರಣೆಯ ಭರವಸೆ ನೀಡಿದ್ದಾರೆ. ಆದರೆ, ಕೋವಿಡ್ ಕಾರಣದಿಂದ ಈ ಬಾರಿ ಸಾಧ್ಯವಾಗಿಲ್ಲ. ಆದರೆ, ಮುಂದಿನ ದಿನಗಳಲ್ಲಿ ವೇತನ ಪರಿಷ್ಕರಣೆ ಮಾಡಿಕೊಡುವುದಾಗಿ ಹೇಳಿದರು.
ಇದೇ ವೇಳೆ, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಡೆಸಿದ ಮುಷ್ಕರದ ವೇಳೆ ಅಮಾನತುಗೊಂಡಿರುವ ಸಿಬ್ಬಂದಿಯನ್ನು ಮಾನವೀಯತೆ ದೃಷ್ಟಿಯಿಂದ ಮತ್ತೆ ಸೇವೆಗೆ ನೇಮಿಸಿಕೊಳ್ಳಲಾಗಿದೆ. ಅವರನ್ನು ಮೂಲ ಘಟಕಗಳಿಗೆ ನಿಯೋಜಿಸುವ ಬಗ್ಗೆ ಕಾರ್ಮಿಕ ನ್ಯಾಯಾಲಯದಲ್ಲಿನ ಬೆಳವಣಿಗೆ ಆಧರಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಶ್ರೀರಾಮುಲು ವಿವರಿಸಿದರು.