ಬೆಂಗಳೂರು: ಸಾರಿಗೆ ಸಂಸ್ಥೆಯ ನೌಕರರ ನುಷ್ಕರವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ಹೋರಾಟಗಾರರ ವೇಡಿಕೆ ಈಡೇರಿಸಲು ಚಿಂತನೆ ನಡೆಸಿದೆ.
ಸರ್ಕಾರ ತನ್ನ ಹಣಕಾಸಿನ ಇತಿಮಿತಿಯೊಳಗೆ ಸಾರಿಗೆ ನೌಕರರ ಬೇಡಿಕೆ ಈಡೇರಿಸಲಾಗುತ್ತದೆ ಎಂದು ಸಾರಿಕೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸಾರಿಗೆ ಸಂಸ್ಥೆಯ ನೌಕರರ ಮುಷ್ಕರ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಸಾರ್ವಜನಿರಿಗೆ ತೊಂದರೆಯಾಗಬಾರದೆಂಬ ನಿಟ್ಟಿನಲ್ಲಿ ನೌಕರರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಬಹುದು. ಆದರೆ ಸಾರಿಗೆ ನಿಗಮಗಳ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂಬ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಒಂದು ನಿಗಮದ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿದರೆ ಇನ್ನುಳಿದ ನಿಗಮಗಳ ನೌಕರರನ್ನೂ ಅದೇ ರೀತಿ ಪರಿಗಣಿಸಬೇಕಾಗುತ್ತದೆ. ಹಾಗಾಗಿ ಈ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಸ್ಪಷ್ಟವಾಗಿ ಹೇಳಿದರು.