ಬೆಂಗಳೂರು: ರಾಜ್ಯದ ಸಾರಿಗೆ ಸಂಸ್ಥೆಗಳ ನೌಕರರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ಕೆಎಸ್ಸಾರ್ಟಿಸಿ ಸಹಿತ ರಾಜ್ಯದ ಸಾರಿಗೆ ನಿಗಮಗಳ ನೌಕರರ ವೇತನ ಹೆಚ್ಚಳ ಕುರಿತಂತೆ ಇಂದೇ ಆದೇಶ ಹೊರಬೀಳುವ ಸಾಧ್ಯತೆಗಳಿವೆ.
ಕೆಪಿಟಿಸಿಎಲ್ ಮತ್ತು ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಇಂದೇ ಅಧಿಕೃತ ಆದೇಶ ಹೊರಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಟಿಸಿಎಲ್ ನೌಕರರ ವೇತನವನ್ನು ಶೇ.20ರಷ್ಟು ವೇತನ ಹೆಚ್ಚಿಸಲಾಗುವುದು ಎಂದು ತಿಳಿಸಿದರು ಮತ್ತು ಸಾರಿಗೆ ನೌಕರರ ಶೇ.15ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದೂ ಪ್ರಕಟಿಸಿದ ಅವರು, ಇಂದೇ ಆದೇಶ ಹೊರಡಿಸುತ್ತೇವೆ ಎಂದು ತಿಳಿಸಿದರು.