ಬೆಂಗಳೂರು: ಯುಗಾದಿ ಹಬ್ಬದ ಸಂದರ್ಭದಲ್ಲೂ ಸಾರಿಗೆ ನಿಗಮದ ನೌಕರರು ಮುಷ್ಕರ ಮುಂದುವರಿಸಿದ್ದು, ಕೆಸ್ಸಾರ್ಟಿಸಿ, ಬಿಎಂಟಿಸಿ ಬಸ್‌ಗಳ ಸಂಚಾರ ಇಂದೂ ಸ್ಥಬ್ದಗೊಂಡಿವೆ. ಅಲ್ಲೊಂದು ಇಲ್ಲೊಂದು ಬಸ್ಸುಗಳ ಸಂಚಾರ ಕಂಡುಬರುತ್ತಿದೆಯಾದರೂ ಸಾರಿಗೆ ಸಂಸ್ಥೆಯ ಬಸ್ಸುಗಳನ್ನೇ ಅವಲಂಭಿಸಿರುವ ಮಂದಿ ಪರದಾಡುವಂತಾಗಿದೆ.
ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ನಡೆಸುತ್ತಿರುವ ಮುಷ್ಕರ ಕಳೆದ 8 ದಿನಗಳಿಂದ ಚಳುವಳಿ ರೂಪದಲ್ಲಿ ನಡೆಯುತ್ತಿದೆ. ಇಂದು ರಾಜ್ಯಾದ್ಯಂತ ಸಾರಿಗೆ ನೌಕರರಿಂದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಹೋರಾಟ ಸಾಗಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡಲಾಗುವುದು ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ಕೂಟ ಹೇಳಿದೆ.