ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಫೈನಾನ್ಸಿಯಲ್ ಎಕ್ಸ್ಪ್ರೆಸ್ ಮೊಬಿಲಿಟಿ 2025 ರ ರಾಷ್ಟ್ರೀಯ ಪ್ರಶಸ್ತಿಯನ್ನು ಅತ್ಯುತ್ತಮ ಸಾರ್ವಜನಿಕ ಸಾರಿಗೆ ಉಪಕ್ರಮದಡಿ ಪಡೆದಿದೆ.
ನವದೆಹಲಿಯಲ್ಲಿ ಬುಧವಾರ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ನಿಗಮದ ಮುಖ್ಯ ತಾಂತ್ರಿಕ ಶಿಲ್ಪಿ ಕೆ.ಎಚ್.ಶ್ರೀನಿವಾಸ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.
ಅತ್ಯುತ್ತಮ ಸಂಪರ್ಕ, ಸಾರ್ವಜನಿಕ ಲಭ್ಯತೆ ಹಾಗೂ ಉತ್ತಮ ಸಾರ್ವಜನಿಕ ಸಾರಿಗೆ ಸೇವೆಗಾಗಿ KSRTCಗೆ ಫೈನಾನ್ಸಿಯಲ್ ಎಕ್ಸ್ಪ್ರೆಸ್ ಮೊಬಿಲಿಟಿ ಪ್ರಶಸ್ತಿ ನೀಡಲಾಗಿದೆ