ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಪ್ರತಿಷ್ಠಿತ ಅಖಾಡವೆನಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರ NDA ವಶವಾಗಿದೆ. ಕಾಗ್ರೇಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ಧ BJP-JDS ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಎರಡು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ದಿಗ್ವಿಜಯ ಸಾಧಿಸಿದ್ದಾರೆ.
ಮತಎಣಿಕೆಯುದ್ದಕ್ಕೂ ನಿರಂತರ ಮುನ್ನಡೆ ಸಾಧಿಸುತ್ತಾ ಬಂದ ಕುಮಾರಸ್ವಾಮಿ ಅಂತಿಮವಾಗಿ ಜಯಭೇರಿ ಭಾರಿಸಿ BJP-JDS ಕಾರ್ಯಕರ್ತರ ಸಂಭ್ರಮಕ್ಕೆ ಕಾರಣರಾದರು.






















































