ಧಾರವಾಡ: ಈ ಬಾರಿ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಮತ್ತು ಉತ್ತಮ ಭವಿಷ್ಯವನ್ನು ರೂಪಿಸುವ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರು ಜನತೆಯಲ್ಲಿ ಮನನವಿ ಮಾಡಿದ್ದಾರೆ.
ಕುಂದಗೋಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಪರ ಪ್ರಚಾರ ಕೈಗೊಂಡ ಪ್ರಿಯಾಂಕಾ ಗಾಂಧಿ, ಕಳೆದ 4 ವರ್ಷಗಳಲ್ಲಿ ತಮಗೆ ಆದ ಅನುಭವವನ್ನು ನೋಡಿ ತಾವು ಮತವನ್ನು ಚಲಾವಣೆಯನ್ನು ಮಾಡಿ. ಕಳೆದ ಮೂರು ವರ್ಷಗಳಿಂದ ರಾಜ್ಯದ ಭ್ರಷ್ಠ ಬಿಜೆಪಿ ಸರ್ಕಾರದ ದುರಾಡಳಿತ ಪರಿಣಾಮ ರಾಜ್ಯದ ಜನ ಬೇಸತ್ತಿದ್ದಾರೆ. ಜನರು ಸಂಕಷ್ಟದಲ್ಲಿದ್ದಾರೆ. ಯುವಕರು ಕೆಲಸವಿಲ್ಲದೇ ಇದ್ದಾರೆ. ಇದಕ್ಕೆಲ್ಲಾ ಕಾರಣ ರಾಜ್ಯದ ಬಿಜೆಪಿ ಸರ್ಕಾರ ಎಂದರು.
ಬೆಲೆ ಏರಿಕೆಯಿಂದ ತತ್ತರಿಸಿದ ನಮ್ಮ ಮಹಿಳೆಯರಿಗೆ, ಕಾಂಗ್ರೆಸ್ ಪಕ್ಷವು ಪ್ರತಿ ತಿಂಗಳು ಮನೆ ನಡೆಸುವ ಪ್ರತಿಮನೆಯ ಯಾಜಮಾನಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ 2000 ರೂ. ಪ್ರತಿ ತಿಂಗಳು ಕೊಡಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ ಎಂದ ಅವರು, 2,50,000 ಲಕ್ಷ ಸರ್ಕಾರಿ ನೌಕರಿ ಖಾಲಿ ಇದೆ. ಸರ್ಕಾರ ಭರ್ತಿ ಮಾಡಿಲ್ಲ. ಜನರಿಗೆ ಉದ್ಯೋಗಳನ್ನು ಯಾಕೆ ತುಂಬಲ್ಲ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಲ್ಲಿ ಎರಡುವರೇ ಲಕ್ಷ ಖಾಲಿ ಹುದ್ದೆಯನ್ನು ಭರ್ತಿ ಮಾಡುತ್ತೇವೆ ಎಂಬ ಭರವಸೆ ನಾವು ನಿಮಗೆ ನೀಡುತ್ತೇವೆ. ಯುವಶಕ್ತಿಯು ದೇಶದ ಭವಿಷ್ಯವಾಗಿದ್ದು ವಿದ್ಯಾವಂತ ನಿರುದ್ಯೋಗಿಗಳ ಶ್ರೇಯೋಭಿವೃದ್ಧಿಗಾಗಿ ಕಾಂಗ್ರೆಸ್ ಘೋಷಿಸಿರುವ ಯುವನಿಧಿ ಗ್ಯಾರಂಟಿಯೂ ನಿರುದ್ಯೋಗಿ ಯುವಕ, ಯುವತಿಯರಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡಲಾಗುವುದು. ಡಿಪ್ಲೋಮಾ ಆದವರಿಗೆ 1500 ರೂ., ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ಕಾರ್ಯಕ್ರಮ ರಾಜ್ಯದ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದೆ ಎಂದರು.
ಈ ಚುನಾವಣೆ ನಿಮ್ಮ ಭವಿಷ್ಯವನ್ನು ನಿರ್ಧಾರವನ್ನು ಮಾಡುವ ಚುನಾವಣೆ. ಈ ಚುನಾವಣೆ ನಿಮ್ಮ ಮಕ್ಕಳ ಭವಿಷ್ಯವನ್ನು ರೂಪಿಸುವ ಚುನಾವಣೆ. ಈ ಚುನಾವಣೆ ನೀವೆಲ್ಲ ಸೇರಿ ಸಾಕರ ಪಡಿಸಬೇಕಾಗುತ್ತದೆ ಎಂದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಕ್ಷಣವೇ ಅನ್ನಭಾಗ್ಯ, ಕ್ಷೀರಭಾಗ್ಯ ಯೋಜನೆಯ ಕಾರ್ಯಕ್ರಮವನ್ನು ನಾವು ಮತ್ತೊಮ್ಮೆ ಈ ರಾಜ್ಯದಲ್ಲಿ ಅನುಷ್ಠಾನವನ್ನು ಮಾಡಲಿದ್ದೇವೆ ಎಂದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕ ರಾಜ್ಯದ ಸರ್ಕಾರಿ ಬಸ್ಸುಗಳಲ್ಲಿ ರಾಜ್ಯದ ಪ್ರತಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದವರು ಭರವಸೆ ನೀಡಿದರು.





















































