ತುಮಕೂರು: ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಯಾವುದೇ ಅನುಮಾನ ಬೇಡ ಎಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಮ್ಮ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿ ಯೋಜನೆಗಳನ್ನು ಜಾರಿ ಮಾಡಲಿದೆ ಎಂದು ಭರವಸೆ ನೀಡಿದರು.
ಕುಣಿಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ರಂಗನಾಥ್ ಪರ ಪ್ರಚಾರ ಕೈಗೊಂಡ ಡಿ.ಕೆ.ಶಿವಕುಮಾರ್, ಚುನಾವಣೆ ಡಾ. ರಂಗನಾಥ್ ಅವರ ಚುನಾವಣೆ ಅಲ್ಲ. ಅವರು ನೆಪಕ್ಕೆ ಅಭ್ಯರ್ಥಿ. ಈ ಚುನಾವಣೆ ಡಿ.ಕೆ. ಶಿವಕುಮಾರ್, ಕುಮಾರಸ್ವಾಮಿ ಹಾಗೂ ಬಿಜೆಪಿ ನಡುವೆ ನಡೆಯುತ್ತಿರುವ ಚುನಾವಣೆ ಎಂದರು.
ಕಲ್ಪತರು ನಾಡಿನ ಹುಲಿಯೂರದುರ್ಗದಲ್ಲಿ ಇಂದು ಕುಣಿಗಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಡಾ.ರಂಗನಾಥ್ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಿ, ಮಾತನಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬೆಲೆಯೇರಿಕೆಯಿಂದ ಪರದಾಡುತ್ತಿರುವ ಜನರ ಬದುಕಿಗೆ ಕಾಂಗ್ರೆಸ್ ಗ್ಯಾರಂಟಿಗಳು ನೆರವಾಗಲಿವೆ ಎಂದು ತಿಳಿಸಿದೆ.
ನಮ್ಮ… pic.twitter.com/uWxvgXmw2B— DK Shivakumar (@DKShivakumar) May 6, 2023
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿ ಕಾಂಗ್ರೆಸ್ ಸರ್ಕಾರ ಈ ಯೋಜನೆಗಳನ್ನು ಜಾರಿ ಮಾಡಲಿದೆ. ಇಲ್ಲಿ ರಂಗನಾಥ್ ಅಭ್ಯರ್ಥಿ ಎನ್ನುವುದಕ್ಕಿಂತ ನೀವೆಲ್ಲರೂ ಇಲ್ಲಿರುವ ಪ್ರತಿಯೊಬ್ಬರೂ ಅಭ್ಯರ್ಥಿಗಳು. ನೀವು ಉಳಿದ ಐದು ಮಂದಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಸಬೇಕು ಎಂದವರು ಹೇಳಿದರು.
ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಹೀಗಾಗಿ ನೀವು ರಂಗನಾಥ್ ಅವರಿಗೆ ಆಶೀರ್ವಾದ ಮಾಡಿ ರಂಗನಾಥ್ ಅವರನ್ನು ವಿಧಾನಸೌಧಕ್ಕೆ ಕಳುಹಿಸಬೇಕು. ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಬೇಕು ಎಂದು ಡಿಕೆಶಿ ಮನವಿಮಾಡಿದರು.