ಬೆಂಗಳೂರು: ಕುರುಬರ ಅಭಿವೃದ್ಧಿ ನಿಗಮ ಸ್ಥಾಪಿಸಿ ಅವರ ಸರ್ವತೋಮುಖ ಬೆಳವಣಿಗೆಗೆ ಪ್ರಸಕ್ತ ವರ್ಷದಲ್ಲಿ 400 ಕೋಟಿ ರೂಪಾಯಿಗಳನ್ನು ಮೀಸಲಿಡಬೇಕು ಎಂಬ ಮನವಿಯನ್ನು ಕರ್ನಾಟಕ ಪ್ರದೇಶ ಕುರುಬರ ಸಂಘದ ಪದಾಧಿಕಾರಿಗಳ ನಿಯೋಗ ಮಂಗಳವಾರ ಬೆಳಿಗ್ಗೆ ವಿಧಾನಸೌದ ದಲ್ಲಿ ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ ಅವರನ್ನು ಭೇಟಿ ಮಾಡಿ ನೀಡಿದ್ದರು.
ಈ ನಿಯೋಗದ ಜೊತೆ ಚರ್ಚೆ ನಡೆಸಿದ ನಂತರ ಬಿ.ಎ.ಬಸವರಾಜ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.
ರಾಜ್ಯದಲ್ಲಿ ಇರುವ ಕುರುಬರ ಸ್ಥಿತಿಗತಿಗಳ ಬಗ್ಗೆ ವಿವರಣೆ ನೀಡಿ ಸಮಸ್ತ ಕುರುಬ ಸಮಾಜದ ಪರವಾಗಿ ಮಾನ್ಯ ನಗರಾಭಿವೃದ್ಧಿ ಸಚಿವರು, ಕುರುಬರ ಅಭಿವೃದ್ಧಿ ನಿಗಮ ಸ್ಥಾಪಿಸಿ ಸಮಾಜದ ಅಭಿವೃದ್ಧಿಗೆ ಪ್ರಸಕ್ತ ವರ್ಷದಲ್ಲಿ 400 ಕೋಟಿ ರೂಪಾಯಿಗಳನ್ನು ಒದಗಿಸಬೇಕು ಎಂದು ಮನವಿ ಮಾಡಿಕೊಂಡರು.