ಬೆಂಗಳೂರು: ರಾಜ್ಯದಲ್ಲಿನ ಕೆರೆಗಳ ಅಭಿವೃದ್ಧಿಗೆ ತುರ್ತು ಕ್ರಮವಹಿಸಬೇಕಿದೆ. ಹಾಗಾಗಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಶಾಸಕ ಶ್ರೀ ಕೆ. ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯಲ್ಲಿರುವ ದೊಡ್ಡ ದೊಡ್ಡ ಕೆರೆಗಳನ್ನು ಕೆರೆ ಸಂಜೀವಿನಿ ಯೋಜನೆಯಡಿ ಹೂಳೆತ್ತುವುದು. ಹಾಗೂ ಕಿಂಡಿ ಅಣೆಕಟ್ಟುಗಳು ಇರುವ ಆಸುಪಾಸಿನ ಕೆರೆಗಳನ್ನು ಏತ ನೀರಾವರಿ ಮೂಲಕ ತುಂಬಿಸಲು ಯೋಜನೆ ರೂಪಿಸುವಂತೆ ಶಾಸಕ ರಘುಪತಿ ಭಟ್ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.
ರಾಜ್ಯದಲ್ಲಿ ಕೆರೆಗಳ ಒತ್ತುವರಿಯಾಗುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಯೋಜನೆಗಳಲ್ಲಿ ಕೆರೆ ಒತ್ತುವರಿ ಯಾದರೆ ಕೆರೆಯ ಪಕ್ಕದ ಜಾಗವನ್ನು ವಶಪಡಿಸಿ ಸೇರಿಸಿ ಕೆರೆಯನ್ನು ಅಭಿವೃದ್ಧಿ ಪಡಿಸಲು ಸೂಕ್ತ ಕ್ರಮ ಜರುಗಿಸಿ ಎಂದೂ ಅವರು ಸಲಹೆ ನೀಡಿದರು.
ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ, ಎಚ್. ಎಲ್. ಪ್ರಸನ್ನ ಪ್ರಧಾನ ಇಂಜಿನಿಯರ್ ಸಣ್ಣ ನೀರಾವರಿ ಇಲಾಖೆ (ದಕ್ಷಿಣ ವಲಯ) ಜಿ.ಟಿ.ಸುರೇಶ್, ಮುಖ್ಯ ಇಂಜಿನಿಯರ್, ಸಣ್ಣ ನೀರಾವರಿ (ಉತ್ತರ ವಲಯ), ಗೋಕುಲ್ ದಾಸ್, ಕಾರ್ಯಪಾಲಕ ಅಭಿಯಂತರರು, ಸಣ್ಣ ನೀರಾವರಿ ಇಲಾಖೆ ಮಂಗಳೂರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.