ಮುಂಬೈ: ಸಂಗೀತ ಲೋಕವನ್ನು ಹಲವು ದಶಕಗಳ ಕಾಲ ಆಳಿದ ಗಾನಕೋಗಿಲೆ ಲತಾ ಮಂಗೇಶ್ಕರ್ ಇನ್ನು ನೆನಪು ಮಾತ್ರ. 50 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಸ್ವರವಾಗಿರುವ ಲತಾ ಮಂಗೇಶ್ಕರ್ ನಿಧನದಿಂದಾಗಿ ಭಾರತೀಯ ಸಿನಿಮಾ ಲೋಕ ಬಡವಾಗಿದೆ.
ಭಾರತೀಯ ಚಿತ್ರರಂಗದ ಶ್ರೇಷ್ಠ ಗಾಯಕರಲ್ಲಿ ಒಬ್ಬರಾಗಿರುವ ಲತಾ ಮಂಗೇಶ್ಕರ್ ಅವರು 1942ರಲ್ಲಿ 13 ನೇ ವಯಸ್ಸಿನಲ್ಲಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದರು. ಸುಮಾರು 30 ಭಾರತೀಯ ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ. ಭಾರತದ ನೈಟಿಂಗೇಲ್ (ಗಾನ ಕೋಗಿಲೆ) ಎಂದೇ ಗುರುತಾಗಿರುವ ಲತಾ ಮಂಗೇಶ್ಕರ್ ಅವರು ಪದ್ಮಭೂಷಣ, ಪದ್ಮವಿಭೂಷಣ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಿದ್ದಾರೆ.
ವಿವಿಧ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು, ಗೌರವಗಳನ್ನು ಪಡೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯಾತಿ ಗಣ್ಯರು ಲತಾ ಮಂಗೇಶ್ಕರ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.