ಮುಂಬೈ: ಹಲವು ದಶಕಗಳ ಕಾಲ ಸಂಗೀತ ಲೋಕವನ್ಬು ಆಳಿದ ಗಾನಕೋಗಿಲೆ ಲತಾ ಮಂಗೇಶ್ಕರ್ ಇನ್ನಿಲ್ಲ. ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.
ಗಾನಕೋಗಿಲೆ ಲತಾ ಮಂಗೇಶ್ಕರ್ ಅವರು ಕೋವಿಡ್ ಪಾಸಿಟಿವ್ ಬಂದು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಂಕಿನಿಂದ ಮುಕ್ತರಾದರೂ ಅವರ ಆರೋಗ್ಯ ಕ್ಷೀಣಿಸಿತು. ಸುಮಾರು 30 ದಿನಗಳಿಂದ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ವೆಂಟಿಲೇಟರನ್ನು ಅವಲಂಬಿತರಾಗಿದ್ದರು.
92 ವರ್ಷದ ಲತಾ ಮಂಗೇಶ್ಕರ್ ಅವರಿಗೆ ಪ್ರತೀತ್ ಸಮ್ದಾನಿ ಮತ್ತು ಅವರ ತಂಡ ಚಿಕಿತ್ಸೆ ನೀಡುತ್ತಿತ್ತು. ಕೆಲ ದಿನಗಳ ನಂತರ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಸುಧಾರಣೆಯಾಗಿದ್ದರಿಂದ ವೆಂಟಿಲೇಟರ್ ನೆರವನ್ನು ತೆಗೆಯಲಾಗಿತ್ತು. ಆದರೆ ಮತ್ತೆ ಹದಗೆಟ್ಟು ವೆಂಟಿಲೇಟರ್ ನೆರವು ಒದಗಿಸಲಾಗಿತ್ತು. ಆದರೆ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಲತಾ ಮಂಗೇಶ್ಕರ್ ಅವರು ಚಿಕಿತ್ಸೆಗೆ ಸ್ಪಂಧಿಸಿಲ್ಲ. ಇಂದು ಅವರು ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.