ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತು ರಾಜ್ಯ ರಾಜಕೀಯದಲ್ಲಿ ಚರ್ಚೆ ಸಾಗಿರುವಂತೆಯೇ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸ್ಪಷಗಟನೆ ನೀಡಿದ್ದಾರೆ. ಅಷ್ಟೇ ಅಲ್ಲ, ಪಕ್ಷದ ರಾಜ್ಯ ನಾಯಕರಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ.
‘ನಾಯಕತ್ವ ಬದಲಾವಣೆ ಇಲ್ಲ, ಸಿಎಂ ಬಸವರಾಜ ಬೊಮ್ಮಾಯಿ ಅವರು ಅವಧಿ ಪೂರ್ಣ ಮಾಡುತ್ತಾರೆ. ಬೊಮ್ಮಾಯಿ ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸುತ್ತೇವೆ. ರಾಜ್ಯದಲ್ಲಿ ಪಕ್ಷ, ಸರ್ಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ನಳಿನ್ ಅವರ ಹೇಳಿಕೆಯನ್ನಾಧರಿಸಿ ಬಿಜೆಪಿ ಟ್ವೀಟ್ ಮಾಡಿದೆ.
ನಾಯಕತ್ವ ಬದಲಾವಣೆ ಇಲ್ಲ, ಸಿಎಂ ಬಸವರಾಜ ಬೊಮ್ಮಾಯಿ ಅವರು ಅವಧಿ ಪೂರ್ಣ ಮಾಡುತ್ತಾರೆ. ಬೊಮ್ಮಾಯಿ ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸುತ್ತೇವೆ. ರಾಜ್ಯದಲ್ಲಿ ಪಕ್ಷ, ಸರ್ಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ : ಶ್ರೀ @nalinkateel #NalinSpeaks
— BJP Karnataka (@BJP4Karnataka) January 25, 2022
ಕೆಲವೊಂದು ವಿಚಾರಗಳ ಬಗ್ಗೆ ಬಹಿರಂಗವಾಗಿ ಮಾತನಾಡುವವರ ಜೊತೆ ಮಾತಾಡುತ್ತೇನೆ. ಶಿಸ್ತು ಸಮಿತಿ ಮೂಲಕ ವರಿಷ್ಠರಿಗೆ ವರದಿ ಸಲ್ಲಿಸಿ ಕ್ರಮ ಕೈಗೊಳ್ಳುತ್ತೇವೆ. ಕೆಲವರಿಗೆ ಈಗಾಗಲೇ ಸ್ಪಷ್ಟೀಕರಣ ಕೇಳಿದ್ದು, ಅವರು ಸ್ಪಷ್ಟನೆ ನೀಡಿದ್ದಾರೆ ಎಂದು ನಳಿನ್ ಕುಮಾರ್ ತಿಳಿಸಿದ್ದಾರೆ.
ಬಿಜೆಪಿಯಲ್ಲಿ ಎಲ್ಲರೂ ಶಿಸ್ತು ಅನುಸರಿಸಬೇಕು. ಸಿಎಂ, ಅಧ್ಯಕ್ಷರು, ಶಾಸಕರಿಗೆ ಎಂದು ಬೇರೆ ಬೇರೆ ಶಿಸ್ತು ಎನ್ನುವುದಿಲ್ಲ. ಎಲ್ಲರಿಗೂ ಒಂದೇ ಕಾನೂನು. ಬಿಜೆಪಿಯಲ್ಲಿ ಶಿಸ್ತು ಉಲ್ಲಂಘನೆಯನ್ನು ನಾವು ಸಹಿಸುವುದಿಲ್ಲ. ಯಾರೂ ಕೂಡ ಬಹಿರಂಗ ಹೇಳಿಕೆ ನೀಡಬಾರದು. ಪಕ್ಷದ ವೇದಿಕೆಯಲ್ಲಿ ಮಾತನಾಡಬೇಕು ಎಂದು ನಳಿನ್ ಕುಮಾರ್ ಎಚ್ಚರಿಕೆಯನ್ನೂ ನೀಡಿದ್ದಾರೆ.
ಬಿಜೆಪಿಯಲ್ಲಿ ಎಲ್ಲರೂ ಶಿಸ್ತು ಅನುಸರಿಸಬೇಕು. ಸಿಎಂ, ಅಧ್ಯಕ್ಷರು, ಶಾಸಕರಿಗೆ ಎಂದು ಬೇರೆ ಬೇರೆ ಶಿಸ್ತು ಎನ್ನುವುದಿಲ್ಲ. ಎಲ್ಲರಿಗೂ ಒಂದೇ ಕಾನೂನು. ಬಿಜೆಪಿಯಲ್ಲಿ ಶಿಸ್ತು ಉಲ್ಲಂಘನೆಯನ್ನು ನಾವು ಸಹಿಸುವುದಿಲ್ಲ. ಯಾರೂ ಕೂಡ ಬಹಿರಂಗ ಹೇಳಿಕೆ ನೀಡಬಾರದು. ಪಕ್ಷದ ವೇದಿಕೆಯಲ್ಲಿ ಮಾತನಾಡಬೇಕು : ಶ್ರೀ @nalinkateel #NalinSpeaks
— BJP Karnataka (@BJP4Karnataka) January 25, 2022