ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ಹಿರೇಮುದ್ದೇನಹಳ್ಳಿಯಲ್ಲಿ ಸೋಮವಾರ ಎರಡು ಚಿರತೆಗಳು ದಾಳಿ ಮಾಡಿ, ಹಸುವನ್ನು ಕೊಂದು ಹಾಕಿವೆ.
ಗ್ರಾಮದ ರೈತ ಗಂಗರೆಡ್ಡಿ ಎಂಬುವವರ ಹಸುವನ್ನು ಸೋಮವಾರ ಮಧ್ಯಾಹ್ನ 1ಗಂಟೆ ಸುಮಾರಿಗೆ ಕಾಡಂಚಿನ ಹೊಲದಲ್ಲಿ ಮೇಯಲು ಬಿಟ್ಟಿದ್ದ ಹಸುವನ್ನು ಕಚ್ಚಿವೆ.ಸ್ಥ ಳದಲ್ಲಿದ್ದ ರೈತ ಕೂಗಿಕೊಳ್ಳುತ್ತಿದ್ದಂತೆ ಚಿರತೆಗಳು ಹಸುವನ್ನು ಬಿಟ್ಟು ಓಡಿ ಹೋಗಿವೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು. ಕಳೆದ ಕೆಲ ತಿಂಗಳುಗಳಿಂದ ಈ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ರೈತರು ಹಾಗೂ ಜಾನುವಾರು ಸಾಕಣೆದಾರರು ಭಯದಲ್ಲಿ ಬದುಕುವಂತಾಗಿದೆ. ಅರಣ್ಯಇಲಾಖೆಗೆ ಹಲವು ಬಾರಿ ಮನವಿ ಮಾಡಿದರೂ ಚಿರತೆ ಸೆರೆಗೆ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.