ಬೆಂಗಳೂರು: ಬೆಂಗಳೂರಿನ ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ದವೂ ಎಫ್ಐಆರ್ ದಾಖಲಾಗಿರುವ ಬೆಳವಣಿಗೆ ಆಡಳಿತಾರೂಢ ಬಿಜೆಪಿಗೆ ಮುಜುಗರ ಉಂಟುಮಾಡಿದೆ. ಈ ಪ್ರಕರಣವನ್ನು ಮುಂದಿಟ್ಟು ಪ್ರತಿಪಕ್ಷ ಕಾಂಗ್ರೆಸ್ ಆಡಳಿತಾರೂಢ ಬಿಜೆಪಿ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದೆ. ಈಶ್ವರಪ್ಪ ಪ್ರಕರಣ, ಜಾರಕಿಹೊಳಿ ಕೇಸ್ ರೀತಿಯಲ್ಲೇ ಲಿಂಬಾವಳಿ ವಿರುದ್ದದ ಕೇಸ್ ಕೂಡಾ ಸದ್ದಿಲ್ಲದೆ ಮುಗಿಯಲಿದೆಯೇ ಎಂಬ ಪ್ರಶ್ನೆಯನ್ನು ಕಾಂಗ್ರೆಸ್ ಮುಂದಿಟ್ಟಿದೆ.
◆ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರ ರಕ್ಷಣೆ
◆ಮತ್ತೊಬ್ಬ ಗುತ್ತಿಗೆದಾರ ಪ್ರಸಾದ್ ಆತ್ಮಹತ್ಯೆ ಪ್ರಕರಣದಲ್ಲೂ ಅಧಿಕಾರಿಗಳ ರಕ್ಷಣೆ
◆ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಶಾಸಕ ಅರವಿಂದ್ ಲಿಂಬಾವಳಿ ರಕ್ಷಣೆ
CM @BSBommai ಅವರು CCM ಆಗಿದ್ದಾರೆ –
"ಕ್ರಿಮಿನಲ್ಸ್ ಕೇರ್‌ಟೇಕರ್ ಮಿನಿಸ್ಟರ್"— Karnataka Congress (@INCKarnataka) January 2, 2023
ಈ ನಡುವೆ, ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಹೆಸರನ್ನು ಬರೆದಿಟ್ಟು ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಪ್ರಕರಣವನ್ನು ಮುಂದಿಟ್ಟು ಬಿಜೆಪಿಯನ್ನು ಕಟ್ಟಿಹಾಕುವ ಪ್ರಯತ್ನಕ್ಕೆ ಕಾಂಗ್ರೆಸ್ ಮುಂದಾಗಿದೆ. ಅದಾಗಲೇ ಪ್ರದೀಪ್ ಮನೆಗೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕರ ನಡೆ ಕುತೂಹಲಕ್ಕೆ ಕಾರಣವಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ ಕಗ್ಗಲೀಪುರದ ಪ್ರದೀಪ್ ಅವರ ನಿವಾಸಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿದರು. ಮೃತ ಪ್ರದೀಪ್ ಕುಟುಂಬದವರಿಗೆ ಈ ನಾಯಕರು ಸಾಂತ್ವನ ಹೇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ ಕೂಡಾ ಈ ವೇಳೆ ಉಪಸ್ಥಿತರಿದ್ದರು.
ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ ಕಗ್ಗಲೀಪುರದ ಪ್ರದೀಪ್ ಅವರ ನಿವಾಸಕ್ಕೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ @rssurjewala ಅವರ ಜೊತೆಗೂಡಿ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ @RLR_BTM ಸೇರಿದಂತೆ ಇನ್ನಿತರರು ನನ್ನೊಂದಿಗಿದ್ದರು. pic.twitter.com/wMalfFvYey
— Siddaramaiah (@siddaramaiah) January 3, 2023























































