ಲಿಮ್ಕಾ ಬುಕ್ ನಲ್ಲಿ ದಾಖಲಾದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ.. ರಾಜ್ಯದ ಸಾಧನೆಗೆ ಪ್ರಶಂಸೆ..
ಬೆಂಗಳೂರು: ಕೇಂದ್ರ ಭೂಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಸಂಸದ ರಮೇಶ್ ಜಿಗಜಿಣಗಿ ಅವರ ನೇತೃತ್ವದಲ್ಲಿ ಚಾಲನೆ ನೀಡಲಾದ ಸೊಲಾಪುರ- ವಿಜಯಪುರ ಮಾರ್ಗದ 25.54 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿಯು ಕೇವಲ 18 ಗಂಟೆಗಳಲ್ಲಿ ಪೂರ್ಣಗೊಳಿಸಲಾಗಿದೆ.
ಲಿಮ್ಕಾ ಬುಕ್ ನಲ್ಲಿ ದಾಖಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೇ ಟ್ವೀಟ್ ಮಾಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಕ ಈ ಕಾಮಗಾರಿ ಅನುಷ್ಟಾನ ಗೊಳ್ಳುತ್ತಿದೆ. ಈ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದ ಡಿಸಿಎಂ,
ಕೇಂದ್ರ ಸಚಿವ ನಿತಿನ್ ಗಡ್ಕರಿ, ತಂಡಕ್ಕೆ ಅಭಿನಂದಿಸಿದ್ದಾರೆ.