ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿರೀಕ್ಷಿತ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮತ್ತಷ್ಟು ದಿನ ಲಾಕ್‌ಡೌನ್ ವಿಸ್ತರಿಸಲಾಗಿದೆ.
ತಾಂತ್ರಿಕ ಸಲಹಾ ಸಮಿತಿಯ ವರದಿ ಆಧರಿಸಿ ಸಚಿವರು, ಅಧಿಕಾರಿಗಳು ಹಾಗೂ ತಜ್ಞರ ಜೊತೆ ಸುದೀರ್ಘ ಸಮಾಲೋಚನೆ ನಡೆಸಿ ಸಿಎಂ ಯಡಿಯೂರಪ್ಪ ಅವರು ಈ ತೀರ್ಮಾನಕ್ಕೆ ಬಂದಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು ನೂತನ ನಿಯಮಾವಳಿಗಳನ್ನು ಘೋಷಿಸಿದರು. ಜೂನ್ 14ರವರೆಗೂ ಲಾಕ್‌ಡೌನ್ ಕಠಿಣ ನಿಯಮ ಮುಂದುವರಿಯಲಿದೆ ಎಂದು ಸಿಎಂ ತಿಳಿಸಿದರು.
ಇದೇ ವೇಳೆ, ಮೀನುಗಾರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೆ, ನೇಕಾರರಿಗೆ, ಅನುದಾನಿಕ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಸಹಾಯಧನವನ್ಬು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.
ರಾಜ್ಯ ಸರ್ಕಾರದಿಂದ ಮತ್ತೆ 500 ಕೋ.ರೂ.ಪರಿಹಾರ ಘೋಷಣೆ:
- ಆಶಾ ಕಾರ್ಯಕರ್ತೆಯರಿಗೆ ತಲಾ 3000 ರೂ ಸಹಾಯಧನ.
- ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ 2000 ರೂಪಾಯಿ ಸಹಾಯಧನ.
- ಮೀನುಗಾರರಿಗೆ 3000 ರೂಪಾಯಿ ಆರ್ಥಿಕ ನೆರವು.
- ಚಲನಚಿತ್ರ ದೂರದರ್ಶನ ಕಲಾವಿದರಿಗೆ ತಲಾ 3000 ರೂ ಪರಿಹಾರ.
- ಅನುದಾನಿತ ಖಾಸಗಿ ಶಾಲಾ ಶಿಕ್ಷಕರಿಗೆ ತಲಾ 5,000 ರೂಪಾಯಿ ಸಹಾಯಧನ.
- ಸಿ ವರ್ಗದ ದೇವಾಲಯಗಳ ಅರ್ಚಕರಿಗೆ, ಅಡುಗೆ ಸಿಬ್ಬಂದಿಗೆ ಆರ್ಥಿಕ ನೆರವು.
- ಮಸೀದಿಗಳಲ್ಲಿ ಕಾರ್ಯನಿರ್ವಹಿಸುವ ಮಂದಿಗೂ ತಲಾ 3000 ರೂಪಾಯಿ.
- ಮಗ್ಗಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ತಲಾ 3000 ರೂಪಾಯಿ ನೆರವು.
- ಸಣ್ಣ ಕೈಗಾರಿಕೆಗಳ ವಿದ್ಯುತ್ ಬಿಲ್ ವಿನಾಯಿತಿ.
- ಶಾಲಾ ಮಕ್ಕಳಿಗೆ ಹಾಲಿನ ಪುಡಿ ವಿತರಣೆಗೆ ಕ್ರಮ..