ಹಾವೇರಿ: ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ಡೌನ್ ವಿಸ್ತರಣೆಗೆ ಸಂಬಂಧಪಟ್ಟಂತೆ ಕೋವಿಡ್ ಟಾಸ್ಕ್ ಫೋರ್ಸ್ ಸಂಪೂರ್ಣ ವಿವರವನ್ನು ಅಂಕಿ-ಅಂಶಗಳ ಸಮೇತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಒಂದೆರಡು ದಿನಗಳಲ್ಲಿ ನೀಡಲಿದೆ. ಅದರ ಆಧಾರದ ಮೇಲೆ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನಿರ್ಧಾರ ಕೈಗೊಳ್ಳುವರು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೊಂದಿಗೆ ಶಿಗ್ಗಾವಿಯಿಂದ ವಿಡಿಯೋ ಕಾನ್ಪರೆನ್ಸ್ ನಲ್ಲಿ ಭಾಗವಹಿಸಿ ಹಾವೇರಿ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ವಿವರಿಸಿದ ಬಗ್ಗೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡ ಅವರು, ಮುಖ್ಯಮಂತ್ರಿಗಳು ರಾಜ್ಯದಲ್ಲಿ ಜಿಲ್ಲಾಧಿಕಾರಿ ಮತ್ತು ಮತ್ತು ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ. ಕೋವಿಡ್ ಕಾರ್ಯಪಡೆ ಸದ್ಯದ ಪರಿಸ್ಥಿತಿ ಕುರಿತು ಸಿಎಂಗೆ ವಿವರಣೆ ನೀಡಲಿದೆ. ಸದ್ಯದಲ್ಲಿಯೇ ಸಚಿವ ಸಂಪುಟ ಸಭೆ ನಡೆಯುವುದರಿಂದ ಮುಖ್ಯಮಂತ್ರಿಗಳು ಲಾಕ್ಡೌನ್ ವಿಸ್ತರಣೆಗೆ ಸಂಬಂಧಪಟ್ಟಂತೆ ಅಲ್ಲಿಯೇ ನಿರ್ಧಾರ ಕೈಗಳು ಸಾಧ್ಯತೆಯಿದೆ ಎಂದು ಹೇಳಿದರು.
ಲಾಕ್ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಬಡವರಿಗೆ ಪ್ಯಾಕೇಜ್ ಘೋಷಣೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಅವರು ಹೇಳಿದರು.
2 ಕೋಟಿ ಲಸಿಕೆ ಗಾಗಿ ಗ್ಲೋಬಲ್ ಟೆಂಡರ್ ಕರೆಯಲಾಗಿದೆ ಅದು ಬಂದ ನಂತರ ಲಸಿಕ ಅಭಿಯಾನವನ್ನು ತೀವ್ರಗೊಳಿಸ ಲಾಗುವುದು. ಅವರು ಹೋಮ ಐಸೋಲೇಶನ್ ಆಗಿರುವ ಕೋವಿಡ್ ಸೋಂಕಿತರ ಮೇಲೆ ನಿಗಾ ಇರಿಸಲು ಸೂಚಿಸಲಾಗಿದೆ. ಸೋಂಕಿತರ ಆರೋಗ್ಯವನ್ನು ಗಮನಿಸಿ ಅವರನ್ನು ಕೋವಿಡ್ ಕೇರ್ ಸೆಂಟರ್ ಗೆ ಕರೆತರುವಂತೆ ಸೂಚಿಸಲಾಗಿದೆ. ಶಿಗ್ಗಾವಿ ತಾಲೂಕು ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ ನೂರಕ್ಕೂ ಹೆಚ್ಚು ಆಕ್ಸಿಜನ್ ವ್ಯವಸ್ಥೆ ಇರುವ ಹಾಸಿಗೆಗಳನ್ನು ಸಿದ್ಧಪಡಿಸುವಂತೆ ಸೂಚಿಸಲಾಗಿದೆ ಸರ್ಕಾರದ ವತಿಯಿಂದ ೨೫ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ತಾಲೂಕು ಆಸ್ಪತ್ರೆಗೆ ಹಸ್ತಾಂತರಿಸಲಾಯಿತು ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದರು.