ವರದಿ: ಶ್ವೇತಾ ಎಸ್, ಕೊಣ್ಣೂರ
ಗದಗ: ಗದಗ ಜಿಲ್ಲೆಯನ್ನು ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲ್ ಹೇಳಿದ್ದಾರೆ.
ಗದಗ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಸಚಿವ ಪಾಟೀಲ್, ಮೇ27 ರ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಜೂನ್ 1 ನೇ ತಾರೀಖಿನ ಮಂಗಳವಾರ ಬೆಳಿಗ್ಗೆ 6 ಗಂಟೆಯವರೆಗೆ ಕಠಿಣ ಲಾಕ್ ಡೌನ್ ಮಾಡಲಾಗುವುದು ಎಂದು ತಳಿಸಿದರು. ಈ ಅವಧಿಯಲ್ಲಿ ಸೋಂಕಿತರ ಪ್ರಮಾಣ ಕಡಿಮೆಯಾಗದಿದ್ದಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದ ಸಚಿವರು, ಜನರು ಸಹಕಾರ ನೀಡಬೇಕು. ಅಂದಾಗ ಮಾತ್ರ ಕೊರೊನಾ ಸೋಂಕು ನಿಯಂತ್ರಣ ಮಾಡಲು ಸಾಧ್ಯ ಎಂದರು. ಕಠಿಣ ಲಾಕ್ ಡೌನ್ ಸಂದರ್ಭದಲ್ಲಿ
ತರಕಾರಿ, ಹಣ್ಣು, ಹೂವು ವ್ಯಾಪಾರಸ್ಥರು ತಳ್ಳುಗಾಡಿಗಳಲ್ಲಿ ವ್ಯಾಪಾರ ಮಾಡಬೇಕು ಎಂದರಲ್ಲದೇ, ಎಲ್ಲಾ ಬಗೆಯ ಮಾರುಕಟ್ಟೆಗಳ ಬಂದ್ ಇರಲಿವೆ ಎಂದು ಸ್ಪಷ್ಟ ಪಡಿಸಿದರು.
ತಳ್ಳುವಗಾಡಿವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ವ್ಯಾಪಾರ ಮಾಡಬೇಕು, ಜನರೂ ಸಹ ಮಾಸ್ಕ್ ಧರಿಸಿಯೇ ವ್ಯಾಪಾರ ಮಾಡಬೇಕು ಎಂದರು. ಹಾಲು ಮಾರಾಟ ಪ್ರತಿದಿನ ಬೆಳಿಗ್ಗೆ 8 ಗಂಟೆಯವರೆಗೆ ಅವಕಾಶವಿದ್ದು, ಕಿರಾಣಿ ಸಾಮಾನುಗಳಿಗೆ ಹೋಂ ಡಿಲಿವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದರು.
ರೈತರು ರೈತಾಪಿ ವಸ್ತುಗಳನ್ನು ಖರೀದಿ ಮಾಡಲು ಬೆಳಿಗ್ಗೆ 10 ಗಂಟೆಯವರೆಗೆ ಮಾತ್ರ ಅವಕಾಶವಿದೆ. ನಗರ ಹಾಗೂ ಹಳ್ಳಿಗಳಲ್ಲಿಯೂ ಸಹ ಎಲ್ಲಾ ಬಗೆಯ ಹೋಟೆಲ್ ಗಳೂ ಬಂದ್ ಇರಲಿವೆ. ಹೊಟೇಲ್, ಇದ್ದರೆ ಗ್ರಾಮಾಂತರ ಪ್ರದೇಶದಲ್ಲಿ ಪಿಡಿಒ ಹಾಗೂ ತಲಾಟೆ ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದ ಸಚಿವ ಪಾಟೀಲ್, ಬಾರ್ ಹಾಗೂ ವೈನ್ ಶಾಪ್ ಸಹ 1 ನೇ ತಾರೀಖಿನವರೆಗೂ ಬಂದ್ ಇರಲಿವೆ ಎಂದರು. ಮಾಂಸದಂಗಡಿಗಳೂ ಕೂಡ ಬಂದ್ ಇರಲಿವೆ ಎಂದು ಸಚಿವ ಸಿ ಸಿ ಪಾಟೀಲ್ ಹೇಳಿದರು.