ಬೆಂಗಳೂರು: ಲಾಕ್ ಡೌನ್ ಅಲ್ಲದ ಕಠಿಣ ಲಾಕ್ ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್ ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್ ಡೌನ್ ಆಗಿತ್ತು. ಎಂದು ಜೆಡಿಎಸ್ ನಾಯಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಲಾಕ್ ಡೌನ್ ಅಲ್ಲದ ಕಠಿಣ ಲಾಕ್ ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್ ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್ ಡೌನ್ ಆಗಿತ್ತು.
1/6— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 10, 2021
ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಲಾಕ್ ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ನಾನು ಮೊದಲೇ ಹೇಳಿದ್ದೆ. ಹಾಗೆ ಹೇಳುವಾಗ ಲಾಕ್ ಡೌನ್ ನಿಂದ ಜನ ಜೀವನಕ್ಕೆ ಆಗುವ ತೊಂದರೆಗಳಿಗೆ ಪರಿಹಾರ ಕ್ರಮಗಳಿರಬೇಕು, ಜನರ ಅಗತ್ಯವನ್ನು ಸರ್ಕಾರ ಭರಿಸಬೇಕೆಂದು ಹೇಳಿದ್ದೆ. ಆದರೆ, ಲಾಕ್ ಡೌನ್ ಸಂದರ್ಭದಲ್ಲಿ ನೀಡಬೇಕಾದ ಪರಿಹಾರ ಕ್ರಮಗಳಿಂದ ವಿಮುಖವಾಗಿರುವ ಸರ್ಕಾರ ಬೇಜವಾಬ್ದಾರಿತನ ತೋರಿದೆ ಎಂದು ದೂರಿದ್ದಾರೆ.
ಲಾಕ್ ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ನಾನು ಮೊದಲೇ ಹೇಳಿದ್ದೆ. ಹಾಗೆ ಹೇಳುವಾಗ ಲಾಕ್ ಡೌನ್ ನಿಂದ ಜನ ಜೀವನಕ್ಕೆ ಆಗುವ ತೊಂದರೆಗಳಿಗೆ ಪರಿಹಾರ ಕ್ರಮಗಳಿರಬೇಕು, ಜನರ ಅಗತ್ಯವನ್ನು ಸರ್ಕಾರ ಭರಿಸಬೇಕೆಂದು ಹೇಳಿದ್ದೆ. ಆದರೆ, ಲಾಕ್ ಡೌನ್ ಸಂದರ್ಭದಲ್ಲಿ ನೀಡಬೇಕಾದ ಪರಿಹಾರ ಕ್ರಮಗಳಿಂದ ವಿಮುಖವಾಗಿರುವ ಸರ್ಕಾರ ಬೇಜವಾಬ್ದಾರಿತನ ತೋರಿದೆ.
2/6— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 10, 2021
ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್ ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ. ಕಠಿಣ ನಿಯಮ ಎಂದು ಹೇಳಿ ಲಾಕ್ ಡೌನ್ ನಿಂದ ದೂರ ನಿಂತಿದೆ. ಕೇಂದ್ರವೂ ಇದೇ ಕುತಂತ್ರದ ನಡೆಯನ್ನು ಅನುಸರಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ ಎಂದು ಟೀಕಿಸಿದ್ದಾರೆ.
ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್ ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ. ಕಠಿಣ ನಿಯಮ ಎಂದು ಹೇಳಿ ಲಾಕ್ ಡೌನ್ ನಿಂದ ದೂರ ನಿಂತಿದೆ. ಕೇಂದ್ರವೂ ಇದೇ ಕುತಂತ್ರದ ನಡೆಯನ್ನು ಅನುಸರಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ.
3/6— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 10, 2021
ಲಾಕ್ ಡೌನ್ ಎಂದರೆ ಜನ ಹೊರ ಹೋಗಲಾಗದ ಪರಿಸ್ಥಿತಿ. ಬದುಕಿನ ಅಗತ್ಯವನ್ನು ದುಡಿದುಕೊಳ್ಳಲಾಗದ ದುಸ್ಥಿತಿ. ಸರ್ಕಾರವೇ ಇದರ ಹೊಣೆಗಾರ, ಅದಕ್ಕೆ ಸರ್ಕಾರವೇ ಪರಿಹಾರ ನೀಡಬೇಕು ಎಂಬುದೂ ನನ್ನ ನಿಲುವು, ಸಲಹೆ. ಸರ್ಕಾರ ಸಂಪೂರ್ಣ ಲಾಕ್ ಡೌನ್ ಘೋಷಿಸಬೇಕಿತ್ತು ಮತ್ತು ಪರಿಹಾರ ನೀಡಬೇಕಿತ್ತು. ಆದರೆ ಈವರೆಗೆ ಪರಿಹಾರ ಪ್ಯಾಕೇಜ್ ನ ಮಾತೇ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲಾಕ್ ಡೌನ್ ಎಂದರೆ ಜನ ಹೊರ ಹೋಗಲಾಗದ ಪರಿಸ್ಥಿತಿ. ಬದುಕಿನ ಅಗತ್ಯವನ್ನು ದುಡಿದುಕೊಳ್ಳಲಾಗದ ದುಸ್ಥಿತಿ. ಸರ್ಕಾರವೇ ಇದರ ಹೊಣೆಗಾರ, ಅದಕ್ಕೆ ಸರ್ಕಾರವೇ ಪರಿಹಾರ ನೀಡಬೇಕು ಎಂಬುದೂ ನನ್ನ ನಿಲುವು, ಸಲಹೆ. ಸರ್ಕಾರ ಸಂಪೂರ್ಣ ಲಾಕ್ ಡೌನ್ ಘೋಷಿಸಬೇಕಿತ್ತು ಮತ್ತು ಪರಿಹಾರ ನೀಡಬೇಕಿತ್ತು. ಆದರೆ ಈವರೆಗೆ ಪರಿಹಾರ ಪ್ಯಾಕೇಜ್ ನ ಮಾತೇ ಇಲ್ಲ.
4/6— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 10, 2021
ಮಹಾರಾಷ್ಟ್ರ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಕೇಂದ್ರ ಸರ್ಕಾರಕ್ಕೆ ಕಾಯದೇ ಲಾಕ್ ಡೌನ್ ಮಾಡಿವೆ. ಜನರಿಗೆ ಆಹಾರ ಸೇರಿದಂತೆ ಪರಿಹಾರ ಘೋಷಿಸಿವೆ. ಆಂಧ್ರದಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಇದು ಸರ್ಕಾರಗಳ ಜವಾಬ್ದಾರಿಯುತ ನಡೆ. ಆದರೆ, ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೇಂದ್ರದ ದುರ್ನಡೆಯನ್ನು ರಾಜ್ಯ ಅನುಸರಿಸಬಾರದು ಎಂದು ಹೆಚ್.ಡಿ.ಕೆ ಪ್ರತಿಪಾದಿಸಿದ್ದಾರೆ.
ಮಹಾರಾಷ್ಟ್ರ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಕೇಂದ್ರ ಸರ್ಕಾರಕ್ಕೆ ಕಾಯದೇ ಲಾಕ್ ಡೌನ್ ಮಾಡಿವೆ. ಜನರಿಗೆ ಆಹಾರ ಸೇರಿದಂತೆ ಪರಿಹಾರ ಘೋಷಿಸಿವೆ. ಆಂಧ್ರದಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಇದು ಸರ್ಕಾರಗಳ ಜವಾಬ್ದಾರಿಯುತ ನಡೆ. ಆದರೆ, ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೇಂದ್ರದ ದುರ್ನಡೆಯನ್ನು ರಾಜ್ಯ ಅನುಸರಿಸಬಾರದು.
5/6— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 10, 2021
ಮನೆಗಳಿಂದ ಹೊರ ಬರುವ ಜನರ ಮೇಲೆ ದರ್ಪ ಪ್ರದರ್ಶಿಸುವುದನ್ನು ಬಿಟ್ಟು, ಜನ ಹೊರಗೆ ಬಾರದಂತೆ ಅವರ ಅಗತ್ಯಗಳನ್ನು ಪೂರೈಸುವ, ಪರಿಹಾರ ಒದಗಿಸುವ ಕ್ರಮಗಳತ್ತ ಸರ್ಕಾರ ಗಮನಹರಿಸಬೇಕು. ಈ ವಿಚಾರದಲ್ಲಿ ನೆರೆ ರಾಜ್ಯಗಳು ಅನುಸರಿಸುತ್ತಿರುವ ಕ್ರಮಗಳನ್ನು ರಾಜ್ಯ ಅವಲೋಕಿಸಬೇಕು. ಜನರ ಆರೋಗ್ಯ ಎಷ್ಟು ಮುಖ್ಯವೋ ಜನರ ಬದುಕೂ ಅಷ್ಟೇ ಮುಖ್ಯವಾಗಬೇಕು ಎಂದವರು ಪ್ರತಿಪಾಸಿದ್ದಾರೆ.
ಮನೆಗಳಿಂದ ಹೊರ ಬರುವ ಜನರ ಮೇಲೆ ದರ್ಪ ಪ್ರದರ್ಶಿಸುವುದನ್ನು ಬಿಟ್ಟು, ಜನ ಹೊರಗೆ ಬಾರದಂತೆ ಅವರ ಅಗತ್ಯಗಳನ್ನು ಪೂರೈಸುವ, ಪರಿಹಾರ ಒದಗಿಸುವ ಕ್ರಮಗಳತ್ತ ಸರ್ಕಾರ ಗಮನಹರಿಸಬೇಕು. ಈ ವಿಚಾರದಲ್ಲಿ ನೆರೆ ರಾಜ್ಯಗಳು ಅನುಸರಿಸುತ್ತಿರುವ ಕ್ರಮಗಳನ್ನು ರಾಜ್ಯ ಅವಲೋಕಿಸಬೇಕು. ಜನರ ಆರೋಗ್ಯ ಎಷ್ಟು ಮುಖ್ಯವೋ ಜನರ ಬದುಕೂ ಅಷ್ಟೇ ಮುಖ್ಯವಾಗಬೇಕು.
6/6— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 10, 2021