ಬೆಂಗಳೂರು: ಲಾಕ್‌ಡೌನ್ ಸಂದರ್ಭದಲ್ಲಿ ರಸ್ರೆಗಳಲ್ಲಿ ಸಂಚರಿಸುವವರ ಮೇಲೆ ಲಾಠಿ ಪ್ರಹಾರ ಮಾಡದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚಿಸಿದ್ದಾರೆ.
ಬೆಂಗಳೂರು ಸಹಿತ ರಾಜ್ಯದ ಹಲವೆಡೆ ಪೊಲೀಸರು ನಡೆಸಿದ ಲಾಠಿ ಪ್ರಹಾರದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕೆಲವೊಂದು ವೀಡಿಯೋಗಳು ಭೀಕರತೆಗೆ ಸಾಕ್ಷಿಯಾಗಿವೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪವೂ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಸೂಚನೆಯನ್ನು ನೀಡಿದ್ದಾರೆ.
ಈ ಕುರಿಂತೆ ಟ್ವೀಟ್ ಮಾಡಿ ಪೊಲೀಸ್ ಸಿಬ್ಬಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ನಿಯಮ ಉಲ್ಲಂಘಿಸಿದವರ ಮೇಲೆ ಲಾಠಿ ಪ್ರಹಾರ ಮಾಡಬೇಡಿ ಬದಲಾಗಿ ಕಾನೂನು ರೀತಿಯ ಕ್ರಮವಹಿಸುವಂತೆ ಅವರು ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
Contrary to the videos doing rounds on Social Media, @BlrCityPolice has been strictly advised to only take action strictly as per law, in case of anybody violates lock-down guidelines. They have been advised not to use any kind of force in this regard. (1/2)
— CP Bengaluru ಪೊಲೀಸ್ ಆಯುಕ್ತ ಬೆಂಗಳೂರು (@CPBlr) May 10, 2021
ಇದೇ ವೇಳೆ ಅಗತ್ಯ ಸನ್ನಿವೇಶಗಳಲ್ಲಿ ಸಂಚರಿಸಬೇಕಿದ್ದರೆ ಡಿಸಿಪಿ ಸಂತೋಷ್ ಬಾಬು ಅವರನ್ನು ಸಂಪರ್ಕಿಸಿ ಅನುಮತಿ ಪಡೆಯಬಹುದು ಎಂದು ಅವರು ಸಲಹೆಮಾಡಿದ್ದಾರೆ.