ಬೆಂಗಳೂರು: ಕೊರೋನ ಕಾರಣದಿಂದಾಗಿ ಲಾಕ್‌ಡೌನ್ ರೀತಿ ಕಠಿಣ ನಿಯಮ ಜಾರಿಯಲ್ಲಿದೆ. ಹಾಗಾಗಿ ಸಿನಿಮಾ ಹಾಗೂ ಕಿರುತೆರೆ ಕ್ಷೇತ್ರದಲ್ಲಿ ದುಡಿಯುವ ಮಂದಿ ಬಡವಾಗಿದ್ದಾರೆ.
ಧಾರವಾಹಿಗಳು, ಸಿನಿಮಾಗಳ ಶೂಟಿಂಗ್ ಸ್ಥಗಿತಗೊಂಡಿದ್ದು ಈ ಕ್ಷೇತ್ರದಲ್ಲಿ ದುಡಿಯುವ ಮಂದಿ ಕೆಲಸವಿಲ್ಲದೆ ಪರದಾಡುವಂತಾಗಿದೆ. ಈ ಸಂಧಿಕಾಲದಲ್ಲಿ ಚಿತ್ರೋದ್ಯಮವನ್ನು ಅವಲಂಭಿಸಿರುವ ಮಂದಿಯ ನೆರವಿಗೆ ನಟ ಉಪೇಂದ್ರ ಧಾವಿಸಿದ್ದಾರೆ.
ಕನ್ನಡ ಚಲನಚಿತ್ರ ರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೇ ಕೋವಿಡ್ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ. ಈ ಕಾರಣ, ಒಕ್ಕೂಟದ ಎಲ್ಲಾ ಸಂಘಗಳ ಸುಮಾರು ಮೂರು ಸಾವಿರ ಕುಟುಂಬಗಳಿಗೆ ಅಭಿಮಾನಿಗಳ ಆಶೀರ್ವಾದದಿಂದ ದಿನಸಿ ಕಿಟ್ ನೀಡಲು ನಿರ್ಧರಿಸಿರುವುದಾಗಿ ಉಪೇಂದ್ರ ಹೇಳಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ರಿಯಲ್ ಸ್ಟಾರ್, ಈ ಕಿಟ್ ವಿತರಣೆ ಬಗ್ಗೆ ತಮ್ಮ ತಮ್ಮ ಸಂಘದ ಮುಖ್ಯಸ್ತರನ್ನು ಸಂಪರ್ಕಿಸುವಂತೆ ಸಲಹೆ ಮಾಡಿದ್ದಾರೆ.
ಕನ್ನಡ ಚಲನಚಿತ್ರ ರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೇ ಕೋವಿಡ್ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ. ಈ ಕಾರಣ,
ಒಕ್ಕೂಟದ ಎಲ್ಲಾ ಸಂಘಗಳ ಸುಮಾರು ಮೂರು ಸಾವಿರ ಕುಟುಂಬಕ್ಕೆ ಅಭಿಮಾನಿಗಳ ಆಶೀರ್ವಾದದಿಂದ ದಿನಸಿ ಕಿಟ್ ನೀಡಲು ನಿರ್ಧರಿಸಿದ್ದೇನೆ. ವಿತರಣೆ ಬಗ್ಗೆ ತಮ್ಮ ತಮ್ಮ ಸಂಘದ ಮುಖ್ಯಸ್ತರನ್ನು ಸಂಪರ್ಕಿಸಿ. ನಿಮ್ಮ ಉಪ್ಪಿ.— Upendra (@nimmaupendra) May 10, 2021
Thousands of workers ,artists, and technicians are devastated due to the onslaught of COVID and are rendered jobless.
I have decided to distribute grocery kits to around three thousand families belonging to all the associations of our “okkuta “ with the blessings of my fans. 🙏— Upendra (@nimmaupendra) May 10, 2021