ಬೆಂಗಳೂರು: ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್‌ಡೌನ್ ವಿಸ್ತರಣೆಮಾಡಲಾಗಿದೆ. ಈ ಸಂಬಂಧ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಿಎಂ ಯಡಿಯೂರಪ್ಪ, ಈಗಿರುವ ಕಠಿಣ ನಿಯಮ ಅಂದಿನವರೆಗೂ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಮೇ 24ರ ವರೆಗೂ ಜಾರಿಯಲ್ಲಿರುತ್ತದೆ. ಆದರೂ ಅದಕ್ಕೂ ಮುನ್ನವೇ ಮಾರ್ಗಸೂಚಿ ಪ್ರಕಟಿಸಿರುವ ರಾಜ್ಯ ಸರ್ಕಾರ ಎರಡು ವಾರಗಳ ಕಾಲ ಲಾಕ್‌ಡೌನ್ ಮಾದರಿ ಕಠಿಣ ನಿಯಮಾವಳಿಗಳನ್ನು ಘೋಷಿಸಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಇರುವ ಸಡಿಲಿಕೆ ಮುಂದುವರಿಯಲಿದೆ. ಆದರೆ ಈ ಸಂದರ್ಭದ ಚಟುವಟಿಕೆಗಳ ಮೇಲೆ ಪೊಲೀಸರ ಹದ್ದಿನ ಕಣ್ಣಿರಲಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡ ಸಿಎಂ ಯಡಿಯೂರಪ್ಪ, ಇನ್ನು ಮುಂದೆ ಯಾವುದೇ ಕಾರಣಕ್ಕೂ ಬೆಳಿಗ್ಗೆ 10 ಗಂಟೆ ನಂತರ ಬೇಕಾಬಿಟ್ಟಿ ವಾಹನ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.
- ಜೂನ್ 7ರ ವರೆಗೂ ಬೆಳಿಗ್ಗೆ 6ರಿಂದ 10 ಗಂಟೆವರೆಗಷ್ಟೇ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ.
- ಅನಂತರವೂ ರಸ್ತೆಯಲ್ಲಿದ್ದರೆ ಕಠಿಣ ಕ್ರಮ.
ಕಠಿಣ ಕ್ರಮ ಅನುಸರಿಸಲು ಸಿಎಂ ಯಡಿಯೂರಪ್ಪ ಆದೇಶ. - ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆದೇಶ ನೀಡಿರುವ ಯಡಿಯೂರಪ್ಪ.
- ಹಿರಿಯ ಅಧಿಕಾರಿಗಳ ಸಭೆಯ ನಂತರ ಲಾಕ್‌ಡೌನ್ ನಿರ್ಧಾರ ಘೋಷಿಸಿದ ಸಿಎಂ.

















































