ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರವನ್ನು ಕಾಂಗ್ರೆಸ್‌ಗೆ ಗೆಲ್ಲಿಸಿಕೊಡಲು ಪಣತೊಟ್ಟಿರುವ ಸಿಎಂ ಸಿದ್ದರಾಮಯ್ಯ ಇಂದಿನಿಂದ ಸಾಂಸ್ಕೃತಿಕ ರಾಜಧಾಬಿಯಲ್ಲಿ ಮೊಕ್ಕಾಂ ಹೂಡಲಿದ್ದಾತೆ.
ಮೂರು ದಿನಗ ಕಾಲ ಮೈಸೂರಿನಲ್ಲಿ ಸವಾರಿ ಕೈಗೊಳ್ಳಲಿದ್ದು ಚಾಮರಾಜನಗರ ಕ್ಷೇತ್ರದಲ್ಲಿ ಆಪ್ತ ಸಚಿವ ಮಹದೇವಪ್ಪ ಪುತ್ರ ಸುನಿಲ್ ಬೋಸ್ ಗೆಲುವಿಗೂ ಕಾರ್ಯತಂತ್ರ ರೂಪಿಸಲಿದ್ದಾರೆ.
ಸೋಮವಾರ ಬೆಳಿಗ್ಗೆ ವರುಣಾ ಕ್ಷೇತ್ರದ ಬಿಳಿಗೆರೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಂಜೆ ಮೈಸೂರಿನಲ್ಲಿ ಕ್ರೈಸ್ತರ ಧರ್ಮಗುರು ಡಾ| ಬರ್ನಾಡ್ ಮೊರೆಸ್ ಅವರನ್ನು ಭೇಟಿ ಮಾಡಲಿದ್ದಾರೆ.
ಮಂಗಳವಾರ ಬೆಳಗ್ಗೆ ಶಂಕರಮಠಕ್ಕೆ ಭೇಟಿ, ಬಳಿಕ ಚಾಮರಾಜ ಕ್ಷೇತ್ರ ಹಾಗೂ ತಿ.ನರಸೀಪುರದಲ್ಲಿ ಚುನಾವಣ ಪ್ರಚಾರ ಸಭೆ. ಸಂಜೆ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಜತೆ ಸಭೆಯಲ್ಲಿ ಭಾಗಿ.
ಬುಧವಾರ ಬೆಳಿಗ್ಗೆ ಸುತ್ತೂರು ಮಠಕ್ಕೆ ಭೇಟಿ, ಬಳಿಕ ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಸುನಿಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿ. ನಂತರ ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗಿ.