ಬೆಂಗಳೂರು: ಲೋಕಸಭಾ ಚುನಾವಣಾ ಕಾವು ಏರುತ್ತಿದ್ದು ಬಹುತೇಕ ಕ್ಷೇತ್ರಗಳಿಗೆ ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಿಸಿವೆ. ಇದೀಗ ಅಭ್ಯರ್ಥಿಗಳ ವರ್ಚಸ್ಸು, ಪಕ್ಷಗಳ ಪ್ರಾಬಲ್ಯ ಬಗ್ಗೆ ಲೆಕ್ಕಾಚಾರ ನಡೆಯುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಯಾವಪಕ್ಷ ಎಷ್ಟು ಸ್ಥಾನಗಳನ್ನು ಗೆಲ್ಲಬಹುದೆಂಬ ಕುತೂಹಲ ಹೆಚ್ಚಾಗಿದೆ.
ಈ ನಡುವೆ, ರಾಜ್ಯದಲ್ಲಿ ಈ ಬಾರಿ 20 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ಲೇಷಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ತಮ್ಮ ಸಮೀಕ್ಷೆ ಪ್ರಕಾರ 20 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ BJP ವಿರೋಧಿಯಾದ ಅಲೆ ಜೋರಾಗಿದೆ. ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ತುತ್ತಾಗಿದ್ದ ರಾಜ್ಯದ ಎಲ್ಲಾ ಕುಟುಂಬಗಳಿಗೆ ಕಾಂಗ್ರೆಸ್ ಗ್ಯಾರಂಟಿಗಳು ನೆಮ್ಮದಿ ತರಿಸಿರುವುದನ್ನು ನಾಡಿನ ಜನತೆ ಹೃದಯಪೂರ್ವಕವಾಗಿ ಒಪ್ಪಿಕೊಂಡಿದ್ದಾರೆ ಎಂದಿರುವ ಸಿದ್ದರಾಮಯ್ಯ, ನಾವು ನಡೆಸಿರುವ ಹಲವು ಸಮೀಕ್ಷೆಗಳಲ್ಲಿ ಮೈಸೂರು, ಚಾಮರಾಜನಗರ ಕ್ಷೇತ್ರಗಳಲ್ಲಿ ಗೆಲ್ಲುವುದೂ ಸೇರಿ 20 ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ ಎನ್ಮುವ ವರದಿಗಳು ಬಂದಿವೆ. ಹೀಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಪರವಾದ ಅಭೂತಪೂರ್ವ ಫಲಿತಾಂಶ ಹೊರಗೆ ಬರಲಿದೆ ಎಂದಿದ್ದಾರೆ.
ರಾಜ್ಯದಲ್ಲಿ @BJP4India ವಿರೋಧಿಯಾದ ಅಲೆ ಜೋರಾಗಿದೆ. ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ತುತ್ತಾಗಿದ್ದ ರಾಜ್ಯದ ಎಲ್ಲಾ ಕುಟುಂಬಗಳಿಗೆ ಕಾಂಗ್ರೆಸ್ ಗ್ಯಾರಂಟಿಗಳು ನೆಮ್ಮದಿ ತರಿಸಿರುವುದನ್ನು ನಾಡಿನ ಜನತೆ ಹೃದಯಪೂರ್ವಕವಾಗಿ ಒಪ್ಪಿಕೊಂಡಿದ್ದಾರೆ.
ನಾವು ನಡೆಸಿರುವ ಹಲವು ಸಮೀಕ್ಷೆಗಳಲ್ಲಿ ಮೈಸೂರು, ಚಾಮರಾಜನಗರ ಕ್ಷೇತ್ರಗಳಲ್ಲಿ… pic.twitter.com/fJwVs18Ewp
— Siddaramaiah (@siddaramaiah) March 24, 2024
ಹತ್ತು ವರ್ಷ ಅಧಿಕಾರ ಮಾಡಿದ ಮೋದಿ ಸರ್ಕಾರಕ್ಕೆ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಹೀಗಾಗಿ ಶ್ರೀರಾಮನ ಹೆಸರಲ್ಲಿ ಮತ ಕೇಳುವಂತಾಗಿದೆ. ರಾಮ ಸರ್ವರಿಗೂ ಸೇರಿದವನು. ನನ್ನ ಹೆಸರಲ್ಲೇ ರಾಮ ಇದ್ದಾನೆ. ಎಂದಿರುವ ಸಿದ್ದರಾಮಯ್ಯ, ಹತ್ತು ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ ಬಿಜೆಪಿ ನಾಯಕರಿಗೆ ಜನರ ಬಳಿ ಹೋಗಲು ಮುಖ ಇಲ್ಲ. ಏಕೆಂದರೆ ಈ ಹತ್ತು ವರ್ಷಗಳಲ್ಲಿ ಬಿಜೆಪಿ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಅದಕ್ಕೇ ಕೇವಲ ಮೋದಿಯವರ ಮುಖ ತೋರಿಸಿ ಚುನಾವಣೆ ಮಾಡ್ತೀವಿ ಎಂದು ಬಿಜೆಪಿ ಹೆಣಗಾಡುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ 50-60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದೆ ಎಂದರು.
ಹೀಗಾಗಿ ಬಿಜೆಪಿ ಸುಳ್ಳುಗಳ ಮೊರೆ ಹೋಗಿದೆ. ನನ್ನ ಬಗ್ಗೆ, ನಮ್ಮ ನಾಯಕರ ಬಗ್ಗೆ, ನಮ್ಮ ಪಕ್ಷದ ಬಗ್ಗೆ ಸರಣಿ ಸುಳ್ಳುಗಳನ್ನು ಹೇಳುತ್ತಾ, ಸುಳ್ಳುಗಳ ಆಧಾರದಲ್ಲೇ ಚುನಾವಣೆ ಮಾಡುತ್ತಿದೆ ಎಂದವರು ಹೇಳಿದ್ದಾರೆ.
ಹತ್ತು ವರ್ಷ ಅಧಿಕಾರ ಮಾಡಿದ @narendramodi ಸರ್ಕಾರಕ್ಕೆ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಹೀಗಾಗಿ ಶ್ರೀರಾಮನ ಹೆಸರಲ್ಲಿ ಮತ ಕೇಳುವಂತಾಗಿದೆ. ರಾಮ ಸರ್ವರಿಗೂ ಸೇರಿದವನು. ನನ್ನ ಹೆಸರಲ್ಲೇ ರಾಮ ಇದ್ದಾನೆ.
ಹತ್ತು ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ @BJP4India ಯವರಿಗೆ ಜನರ ಬಳಿ ಹೋಗಲು ಮುಖ ಇಲ್ಲ. ಏಕೆಂದರೆ ಈ… pic.twitter.com/mbtsORxWPK
— Siddaramaiah (@siddaramaiah) March 24, 2024