ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಸಜ್ಜಾಗಿರುವ ಬಿಜೆಪಿ ಇದೀಗ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. 195 ಅಭ್ಯರ್ಥಿಗಳ ಮೊದಲ ಪಟ್ಟಿ ಶನಿವಾರ ಸಂಜೆ ಬಿಡುಗಡೆ ಮಾಡಲಾಗಿದ್ದು, ಅಚ್ಚರಿಯ ತೀರ್ಮಾನವೆಂಬಂತೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಕೇರಳದಲ್ಲಿ ಟಿಕೆಟ್ ಪ್ರಕಟಿಸಲಾಗಿದೆ.
ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿರುವ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ, ನಿರೀಕ್ಷೆಯಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ವಾರಾಣಸಿಯಿಂದ ಕಣಕ್ಕಿಳಿಯಲಿದ್ದಾರೆ ಎಂದು ಘೋಷಿಸಿದ್ದಾರೆ. ಮೊದಲ ಪಟ್ಟಿಯಲ್ಲಿ 34 ಕೇಂದ್ರ ಸಚಿವರು ಮತ್ತು ಲೋಕಸಭಾ ಸ್ಪೀಕರ್ ಇದ್ದಾರೆ. 28 ಮಹಿಳೆಯರಿಗೆ ಟಿಕೆಟ್ ಪ್ರಕಟಿಸಲಾಗಿದ್ದು, 50 ವರ್ಷದೊಳಗಿನ 47 ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಯುವಜನರ ಸೈನ್ಯ ಕಟ್ಟುವ ಪ್ರಯತ್ನ ಮಾಡಲಾಗಿದೆ.
16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ಪಟ್ಟಿಯಲ್ಲಿ ಗುಜರಾತ್ನ 15 ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು 57 ಮಂದಿ ಒಬಿಸಿ, 27 ಮಂದಿ ಎಸ್ಸಿ, 18 ಮಂದಿ ಎಸ್ಟಿ, ಅಭ್ಯರ್ಥಿಗಳನ್ನೊಳಗೊಂಡ ಪಟ್ಟಿ ಇದಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಗಾಂಧಿನಗರದಿಂದ ಮತ್ತು ಮನ್ಸುಖ್ ಮಾಂಡವಿಯಾ ಪೋರಬಂದರ್ ನಿಂದ ಸ್ಪರ್ಧಿಸಲಿದ್ದಾರೆ.
ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ವಿಧಿಶಾದಿಂದ, ಸ್ಪಜ್ಯೋತಿರಾದಿತ್ಯ ಸಿಂಧಿಯಾ ಗುನಾದಿಂದ, ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಅರುಣಾಚಲ ಪಶ್ಚಿಮದಿಂದ, ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ದಿಬ್ರುಗಢದಿಂದ, ಮತ್ತೊಬ್ಬ ಸಚಿವ ವಿ. ಮುರಳೀಧರನ್ ಅವರು ಅಟ್ಟಿಂಗಲ್ನಿಂದ ಸ್ಪರ್ಧಿಸಲಿದ್ದಾರೆ.
29 फरवरी, 2024 को प्रधानमंत्री श्री @narendramodi की गरिमामयी उपस्थिति और श्री @JPNadda की अध्यक्षता में आयोजित केंद्रीय चुनाव समिति की बैठक में आगामी लोकसभा चुनाव हेतु 195 लोकसभा सीटों के लिए बीजेपी उम्मीदवार के नामों पर मंजूरी दी गई। (1/4) pic.twitter.com/Wv8yVYnegK
— BJP (@BJP4India) March 2, 2024
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಿರುವನಂತಪುರಂನಿಂದ ಸ್ಪರ್ಧಿಸಲಿದ್ದಾರೆ. ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಅವರು ನವದೆಹಲಿ ಕ್ಷೇತ್ರದಿಂದ, ಮನೋಜ್ ತಿವಾರಿ ಈಶಾನ್ಯ ದೆಹಲಿಯಿಂದ ಸ್ಪರ್ಧಿಸಲಿದ್ದಾರೆ ಎಂದು ವಿನೋದ್ ತಾವ್ಡೆ ತಿಳಿಸಿದ್ದಾರೆ. ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕದ ಯಾವುದೇ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಹೆಸರಿಸಿಲ್ಲ.
29 फरवरी, 2024 को प्रधानमंत्री श्री @narendramodi की गरिमामयी उपस्थिति और श्री @JPNadda की अध्यक्षता में आयोजित केंद्रीय चुनाव समिति की बैठक में आगामी लोकसभा चुनाव हेतु 195 लोकसभा सीटों के लिए बीजेपी उम्मीदवार के नामों पर मंजूरी दी गई। (2/4) pic.twitter.com/BpCGQIOXNo
— BJP (@BJP4India) March 2, 2024
29 फरवरी, 2024 को प्रधानमंत्री श्री @narendramodi की गरिमामयी उपस्थिति और श्री @JPNadda की अध्यक्षता में आयोजित केंद्रीय चुनाव समिति की बैठक में आगामी लोकसभा चुनाव हेतु 195 लोकसभा सीटों के लिए बीजेपी उम्मीदवार के नामों पर मंजूरी दी गई। (3/4) pic.twitter.com/lEFwcG2PNg
— BJP (@BJP4India) March 2, 2024




























































