ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ (ಏಪ್ರಿಲ್ 19) ನಡೆಯಲಿದೆ. 102 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಅಧಿಕೃತ ತೆರೆ ಬಿದ್ದಿದ್ದು, ಶುಕ್ರವಾರದಂದು 102 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
21 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಇದಕ್ಕಾಗಿ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ ಚುವರಿ ಭದ್ರತೆ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.