ಮಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡುವುದು ಅನುಮಾನ.
ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರು-ಉಡುಪಿ ಹಾಗೂ ಚಿಕ್ಕಮಗಳೂರು ಕ್ಷೇತ್ರಗಳ ವ್ಯಾಪ್ತಿಯಲ್ಲಿ ರ್ಯಾಲಿ ನಡೆಸುವ ಸಾಧ್ಯತೆಗಳು ಕಡಿಮೆ ಎನ್ನಲಾಗುತ್ತಿದೆ. ಈ ಬಾರಿ ಕರ್ನಾಟಕದ ಎಲ್ಲಾ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿರುವ ಹಿನ್ನೆಲೆಯಲ್ಲಿ ಕಠಿಣ ಸವಾಲು ಇರುವ ಜಿಲ್ಲೆಗಳಿಗೆ ಮೋದಿ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮೋದಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ನಾಯಕರು ಸಭೆ ಸೇರಿ ರೂಪುರೇಷೆ ಸಿದ್ದಪಡಿಸಿದ್ದಾರೆನ್ನಲಾಗಿದೆ. ಮಂಗಳೂರು-ಉಡುಪಿ- ಚಿಕ್ಕಮಗಳೂರು ಜಿಲ್ಲೆಗಳು ಬಿಜೆಪಿ ಪ್ರಾಬಲ್ಯದ ಜಿಲ್ಲೆಗಳಾಗಿವೆ. ಹಾಗಾಗಿ ಇಂತಹ ಬಲಾಡ್ಯ ಕ್ಷೇತ್ರಗಳ ಬದಲಾಗಿ ಕಠಿಣ ಸವಾಲು ಇದುವ ಕ್ಷೇತ್ರಗಳತ್ತ ಮೋದಿ ಪ್ರವಾಸ ಅಯೊಜಿಸಲು ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.