ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಗುರಿಯಾಗಿರುವ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯತೀಂದ್ರ ವಿರುದ್ದ ಚುನಾವಣಾ ಆಯೋಗಕ್ಕೆ ಬಿಜೆಪಿ ನಾಯಕರು ದೂರು ನೀಡಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಧರ್ಮದ ತಾಯಂದಿರು ಗಂಡ-ಮಕ್ಕಳನ್ನು ಕಳೆದುಕೊಳ್ತಾರೆ ಎಂದು ಯತೀಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಈ ಕುರಿತಂತೆ ಮಾಜಿ ಪರಿಷತ್ ಸದಸ್ಯ ಅಶ್ವತ್ಥನಾರಾಯಣ ನೇತೃತ್ವದ ಬಿಜೆಪಿ ನಿಯೋಗ ರಾಜ್ಯ ಚುನಾವಣಾ ಅಧಿಕಾರಿ ಕಚೇರಿಗೆ ತೆರಳಿ ದೂರು ನೀಡಿದೆ. ಯತೀಂದ್ರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ನಾಯಕರು ಆಯೋಗವನ್ನು ಒತ್ತಾಯಿಸಿದ್ದಾರೆ.







































































