ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸಾವನ್ನಪ್ಪಿದ್ದಾರೆ. ಭಾನುವಾರ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಪ್ರಸಾದ ಪತ್ತೆಯಾಗಿದೆ.
ಮೃತರನ್ನು ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ, ವಿದ್ಯಾರಣ್ಯಪುರದ ರುದ್ರಸ್ವಾಮಿ, ಮಲ್ಲಿಕಾರ್ಜುನ, ನಿರ್ದೇಚಿದಂಬರಾಚಾರ್ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರು ಮೂಲದವರೆನ್ನಲಾಗಿದೆ.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.