ರಾಮನಗರ: ಸ್ಯಾಂಡಲ್‌ವುಡ್ ಮತ್ತೊಂದು ಭೀಕರತೆಗೆ ಸಾಕ್ಷಿಯಾಯಿತು. ಕನ್ನಡ ಸಿನಿಲೋಕದ ಭರವಸೆಯ ನಟಿ ರಚಿತಾ ರಾಮ್ ಅಭಿನಯದ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಘೋರ ಅವಘಡ ಸಂಭವಿಸಿದೆ.
ರಾಮನಗರ ಜಿಲ್ಲೆ ಬಿಡದಿ ಹೋಬಳಿ ಜೋಗರಪಾಳ್ಯದಲ್ಲಿ ಸಿನಿಮಾ ಚಿತ್ರೀಕರಣದ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಫೈಟರ್ ವಿವೇಕ್ (35 ವರ್ಷ) ಸಾವನ್ನಪ್ಪಿದ್ದಾರೆ.
ರಚಿತಾ ರಾಮ್ ಅಭಿನಯದ ‘ಲವ್ ಯೂ ರಚ್ಚು’ ಎಂಬ ಚಿತ್ರದ ಚಿತ್ರೀಕರಣ ವೇಳೆ ಈ ಅವಘಡ ಸಂಭವಿಸಿದೆ.
ನಟ ಅಜಯ್ ರಾವ್ ಹಾಗೂ ನಟಿ ರಚಿತಾ ರಾಮ್ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಶೂಟಿಂಗ್ ವೇಳೆ ಅವಘಡ ಸಂಭವಿಸಿದ ನಂತರ ಚಿತ್ರೀಕರಣ ನಿಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.