ದೊಡ್ಡಬಳ್ಳಾಪುರ: ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಬಕಾರಿ ಅಧಿಕಾರಿಗಳು ಕೋಟಿ ಕೋಟಿ ಮೌಲ್ಯದ ಮದ್ಯ ಸೀಜ್ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಮಾರ್ಗದರ್ಶನದಲ್ಲಿ ಬೆಂಗಳೂರು ನಗರದ ಜಿಲ್ಲೆಯ ಅಬಕಾರಿ ಜಿಲ್ಲಾಧಿಕಾರಿ ನಾಗೇಶ್ ಕುಮಾರ್ ನೇತೃತ್ವದಲ್ಲಿ ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಡಿಸ್ಟಿಲರಿಯಲ್ಲಿ ಸೂಕ್ತ ದಾಖಲೆಗಳಿಲ್ಲದೆ ಸಂಗ್ರಹಿಸಿಟ್ಟಿದ್ದ 1.48.985 ಲೀಟರ್ ಮದ್ಯ ಸೇರಿದಂತೆ ದೇವನಹಳ್ಳಿ ಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಒಟ್ಟು 7.86 ಕೋಟಿ ಮೌಲ್ಯದ ಮದ್ಯ ಸೀಜ್ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.
ಚುನಾವಣಾ ನೀತಿ ಸಂಹಿತೆ ಆರಂಭವಾದಂದಿನಿಂದ ಅಬಕಾರಿ ಇಲಾಖೆ ಸೆಕ್ಷೆನ್ ಅಡಿ 45 ಕೇಸ್ ಗಳು ದಾಖಲಿಸಲಾಗಿದ್ದು, 2 ಲಾರಿ, 2 ಕಾರು, ಬೈಕ್ ಸೇರಿದಂತೆ ಒಂಬತ್ತು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.