ಬೆಂಗಳೂರು: ಕಾಂಗ್ರೆಸ್ ಪಕ್ಷದ ಬಾಗಿಲು ತಟ್ಟಿರುವ ಜೆಡಿಎಸ್ ನಾಯಕ ಕುಮಾರ್ ಬಂಗಾರಪ್ಪ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ತಮ್ಮ ನಿರ್ಧಾರದಲ್ಲಿನ ಗಟ್ಟಿತನವನ್ನು ಅನಾವರಣಗೊಳಿಸಿದರು.
ಮಾಜಿ ಶಾಸಕ, ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಅವರು ಡಿ.ಕೆ. ಶಿವಕುಮಾರ್ ಅವರ, ಬೆಂಗಳೂರಿನ ಸದಾಶಿವನಗರದ ನಿವಾಸಕ್ಕೆ ತೆರಳಿ ಕಾಂಗ್ರೆಸ್ ಸೇರ್ಪಡೆ ಸಂಬಂಧ ಸಮಾಲೋಚನೆ ನಡೆಸಿದರು.

ಮುಂದಿನ ತಿಂಗಳು ಶಿವಮೊಗ್ಗ ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಸಿ ಕಾಂಗ್ರೆಸ್ ಸೇರುವುದಾಗಿ ಗುರುವಾರವಷ್ಟೇ ಮಧು ಬಂಗಾರಪ್ಪ ಘೋಷಿಸಿದ್ದರು. ಅದರ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕರನ್ನು ಅವರು ಭೇಟಿ ಮಾಡಿ ಎಲ್ಲರ ಗಮನ ಕೇಂದ್ರೀಕರಿಸುತ್ತಿದ್ದಾರೆ.
























































