ಉಡುಪಿ : ಕಕ್ಕುಂಜೆಯಲ್ಲಿ ಆಯೋಜಿಸಲಾದ 60 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಕಾರ್ಯದಲ್ಲಿ ಸಚಿವ ಮಾಧುಸ್ವಾಮಿ ಭಾಗಿಯಾದರು. ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಕಕ್ಕುಂಜೆ ವಾರ್ಡಿನಲ್ಲಿ 60 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಸಚಿವ ಮಾಧು ಸ್ವಾಮಿ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ನೀರಾವರಿ ಸಚಿವ ಮಾಧುಸ್ವಾಮಿ, ಶಾಸಕ ರಘುಪತಿ ಭಟ್ ಭೂ ಮಾತೆಗೆ ಹಾಲನ್ನು ಅರ್ಪಿಸಿ ನೇಜಿ ನೀಡುವ ಮೂಲಕ ಚಾಲನೆ ನೀಡಿ ಸ್ಥಳೀಯರೊಂದಿಗೆ ಸೇರಿ ನೇಜಿ ನೆಟ್ಟರು. ಈ ವೇಳೆ, ಸುದ್ದಿಗಾರರೊಂದಿಗೆ ಮಾತಾನಾಡಿದ ಸಚಿವರು, ಬಿಜೆಪಿಗೆ ಯಾರಾದರೂ ಬರುವುದಿದ್ದರೆ ಬರ್ರಿ ಬೇರೆ ಪಕ್ಷದಿಂದ ಬಿಜೆಪಿಗೆ ಬರುವುದಾದರೆ ಸ್ವಾಗತ ವಿಸ್ತರಣೆ ರಾಜಕೀಯ ಎಲ್ಲಾ ಪಕ್ಷಗಳ ಉದ್ದೇಶ ಆಗಿರುತ್ತದೆ. ಕಾಂಗ್ರೆಸ್ ನಿಂದ ಯಾರಾದರೂ ಬರುವವರಿದ್ದರೂ ನಾವು ಸ್ವಾಗತಿಸುತ್ತೇವೆ ಎಂದರು.
ವ್ಯಾಕ್ಸಿನ್ ಭೋಗಸ್ ಎಂದಿರುವ ಡಿ.ಕೆ ಶಿವಕುಮಾರ್ ಡಿಕೆಶಿ ಆರೋಪಕ್ಕೆ ಸಚಿವ ಮಾದುಸ್ವಾಮಿ ತಿರುಗೇಟು ನೀಡಿದರು. ವ್ಯಾಕ್ಸಿನ್ ವಿಚಾರದಲ್ಲಿ ಮೋದಿಯನ್ನ ಟೀಕೆ ಮಾಡಿದರೆ ನಿಮಗೆ ಒಳ್ಳೇದಾಗಲ್ಲ. ದೇಶದಲ್ಲಿ 80 ಕೋಟಿ ಜನಕ್ಕೆ ಉಚಿತ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದರು.
ರಾಜ್ಯ ಸರ್ಕಾರ 2000 ಕೋಟಿ ರುಪಾಯಿ ತೆಗೆದಿಟ್ಟಿದೆ. ಡಿಕೆಶಿಯ ಪಾಪದ ಮಾತಿನಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ ಎಂದ ಅವರು, ಟೀಕೆ ಮಾಡುವುದನ್ನು ಮಾಡಿ. ಅದು ನಿಮ್ಮ ಡ್ಯೂಟಿ ಎಂದರು.
ನೈಸರ್ಗಿಕ ಆಪತ್ತಿನ ಕಾಲದಲ್ಲಿ ಎಲ್ಲವನ್ನು ಟೀಕೆ ಮಾಡಬಾರದು. ವ್ಯಾಕ್ಸಿನ್ ಉತ್ಪಾದನೆ ಮಾಡಲು ಕಂಪನಿಯವರಿಗೂ ಕಾಲಾವಕಾಶ ಬೇಕು. ಮುಂದಿನ ಮೂರು ತಿಂಗಳಲ್ಲಿ ರಾಜ್ಯದಲ್ಲಿ ಲಸಿಕೆ ಅಭಿಯಾನ ಮುಗಿಯುತ್ತದೆ ಎಂದ ಮಾಧುಸ್ವಾಮಿ, ಇದು ಡಿಕೆಶಿ ಅವರ ಬದುಕಿನ ಪ್ರಶ್ನೆ. ಹೀಗಾಗಿ ವಿರೋಧ ಮಾಡುತ್ತಾರೆ ಎಂದು ಎದಿರೇಟು ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ಸ್ಥಳೀಯ ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಗಿರಿಧರ್ ಕರಂಬಳ್ಳಿ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.