ಬೆಂಗಳೂರು: ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲ್ಲ ಎಂದಿದ್ದ ಸರ್ಕಾರ ಸದ್ದಿಲ್ಲದಂತೆ ಎಲ್ಲಾ ಜಿಲ್ಲಾ ಮತ್ತು ಕೆಲವು ತಾಲ್ಲೂಕು ಮಟ್ಟದ 71 ಕೇಂದ್ರಗಳ ಸಾಂತ್ವನ ಕೇಂದ್ರಗಳಿಗೆ ಬೀಗ ಜಡಿಸಿ ಮಾತು ತಪ್ಪಿದೆ ಎಂದು ಪ್ರತಿಪಕ್ಷ ಜೆಡಿಎಸ್ ಆರೋಪಿಸಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ನಾಯಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲ್ಲ ಎಂದಿದ್ದ ಮುಖ್ಯಮಂತ್ರಿಗಳು ಸದ್ದಿಲ್ಲದಂತೆ ಎಲ್ಲಾ ಜಿಲ್ಲಾ ಮತ್ತು ಕೆಲವು ತಾಲ್ಲೂಕು ಮಟ್ಟದ 71 ಕೇಂದ್ರಗಳ ಸಾಂತ್ವನ ಕೇಂದ್ರಗಳಿಗೆ ಬೀಗ ಜಡಿಸಿ ಮಾತು ತಪ್ಪಿದ್ದಾರೆ.
1/6— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 1, 2021
ಕೋವಿಡ್ 19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ. ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ ಎಂದವರು ಹೇಳಿದ್ದಾರೆ.
ಕೋವಿಡ್ 19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ. ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ.
2/6— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 1, 2021
ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ, ಆತ್ಮವಿಶ್ವಾಸ ಮೂಡಿಸುತ್ತಿವೆ ಎಂದು ಹೆಚ್ಡಿಕೆ ಹೇಳಿದ್ದಾರೆ.
ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಆರಂಭಗೊಂಡಿದ್ದ ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸಿ ಅದೇಶ ಹೊರಡಿಸಿರುವುದು ದೂರು ದುಮ್ಮಾನ ಪರಿಹರಿಸುವವರು ಯಾರು ಎಂಬ ಪ್ರಶ್ನೆ ಎದುರಾಗಿದೆ ಎಂದಿರುವ ಕುಮಾರಸ್ವಾಮಿ, ಸರ್ಕಾರದ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆ ಲೈಂಗಿಕ ಮತ್ತು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ವೈದ್ಯಕೀಯ ಚಿಕಿತ್ಸೆ, ಕಾನೂನು ನೆರವು, ಸಲಹೆ ನೀಡುವ ಉದ್ದೇಶವನ್ನು ಹೊಂದಿದ್ದರೂ ಕರ್ನಾಟಕದಲ್ಲಿ ಅದು ಪೂರ್ಣ ಪ್ರಮಾಣದಲ್ಲಿ ಕಾರ್ಯ ಮಾಡುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಸರ್ಕಾರದ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆ ಲೈಂಗಿಕ ಮತ್ತು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ವೈದ್ಯಕೀಯ ಚಿಕಿತ್ಸೆ, ಕಾನೂನು ನೆರವು, ಸಲಹೆ ನೀಡುವ ಉದ್ದೇಶವನ್ನು ಹೊಂದಿದ್ದರೂ ಕರ್ನಾಟಕದಲ್ಲಿ ಅದು ಪೂರ್ಣ ಪ್ರಮಾಣದಲ್ಲಿ ಕಾರ್ಯ ಮಾಡುತ್ತಿಲ್ಲ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 1, 2021
ಕೌಟುಂಬಿಕ ಸಮಸ್ಯೆ ಎದುರಿಸುತ್ತಿರುವ ಮಹಿಳೆಯರ ಕಷ್ಟವನ್ನು ದೇವರೇ ಕಾಪಡಬೇಕಿದೆ. ಈ ಸಮಯದಲ್ಲಿ ಸಾಂತ್ವನ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುವುದು ಸೂಕ್ತವಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರೇ ಈ ಕೂಡಲೇ ಅದೇಶ ಹಿಂಪಡೆದು ಸಾಂತ್ವನ ಕೇಂದ್ರಗಳನ್ನು ಮುಂದುವರೆಸಿ. ಶೋಷಿತ ಮಹಿಳೆಯರಿಗೆ ಸಾಂತ್ವನ ಕೇಂದ್ರಗಳು ಆಸರೆಯಾಗಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನು ಕೌಟುಂಬಿಕ ಸಮಸ್ಯೆ ಎದುರಿಸುತ್ತಿರುವ ಮಹಿಳೆಯರ ಕಷ್ಟವನ್ನು ದೇವರೇ ಕಾಪಡಬೇಕಿದೆ. ಈ ಸಮಯದಲ್ಲಿ ಸಾಂತ್ವನ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುವುದು ಸೂಕ್ತವಲ್ಲ.
ಮುಖ್ಯಮಂತ್ರಿ ಯಡಿಯೂರಪ್ಪನವರೇ ಈ ಕೂಡಲೇ ಅದೇಶ ಹಿಂಪಡೆದು ಸಾಂತ್ವನ ಕೇಂದ್ರಗಳನ್ನು ಮುಂದುವರೆಸಿ. ಶೋಷಿತ ಮಹಿಳೆಯರಿಗೆ ಸಾಂತ್ವನ ಕೇಂದ್ರಗಳು ಆಸರೆಯಾಗಲಿ.
6/6— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 1, 2021