ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಘಾಟಿ ಸುಬ್ರಹ್ಮಣ್ಯದಲ್ಲಿ ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ʼ ವತಿಯಿಂದ ನಡೆದ ವಿಶೇಷ ಕಾರ್ಯಕ್ರಮ ಗಮನಸೆಳೆಯಿತು.
ರೈತರಿಂದ ಖರೀದಿ ಮಾಡಿದ ತರಕಾರಿ, ಆಹಾರ ಪದಾರ್ಥಗಳನ್ನು ಆಶಾ ಕಾರ್ಯಕರ್ತೆಯರಿಗೆ ವಿನಯ್ ಗುರೂಜಿ ಅವರ ಸಾನ್ನಿಧ್ಯದಲ್ಲಿ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಡಿಸಿಎಂ ಡಾ.ಅಶ್ವತ್ಥನಾರಾಯಣ, ಸಚಿವರಾದ ಅರವಿಂದ ಲಿಂಬಾವಳಿ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಶಾಸಕ ವೆಂಕಟರಮಣ, ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ, ಗೀವ್ ಇಂಡಿಯಾ ಮುಖ್ಯಸ್ಥ ವಿನೋದ ಸಹಿತ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.