ಮಂಡ್ಯ: ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿರುವ ಮಳವಳ್ಳಿ ಬಳಿಯ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣವನ್ನು ಬೇಧಿಸಿದ್ದ ಪೊಲೀಸರು ಇದೀಗ ತನಿಖೆಯನ್ನೂ ಪೂರ್ಣಗೊಳಿಸಿದ್ದಾರೆ. ತನಿಖೆಯನ್ನು ಕ್ಷಿಪ್ರವಾಗಿ ಪೂರ್ಣಗೊಳಿಸಿರುವ ಮಳವಳ್ಳಿ ಠಾಣೆಯ ಪೊಲೀಸರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
ಈ ನಡುವೆ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿರುವ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಮಂಡ್ಯಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ‘ಮಳವಳ್ಳಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 14 ದಿನಗಳಲ್ಲೆ ತನಿಖೆ ಪೂರೈಸಿ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಲಾಗಿದೆ ಎಂದಿದ್ದಾರೆ.
ಮಳವಳ್ಳಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 14 ದಿನಗಳಲ್ಲೆ ತನಿಖೆ ಪೂರೈಸಿ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿಕೊಂಡಿರು ಬಗ್ಗೆ. pic.twitter.com/vVGtt1F8dp
— SP Mandya (@MandyaPolice) October 25, 2022





















































