ಮಂಗಳೂರು: ಆದ್ಯತೆ ಮೇರೆಗೆ ಮಂಗಳೂರು- ಬೆಂಗಳೂರು ಹೆದ್ದಾರಿ ದುರಸ್ತಿ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿ ನಿರಂತರವಾಗಿ ಮಳೆ ಬಂದಿದ್ದರಿಂದ ತಡವಾಗಿದೆ ಎಂದರು.
ಮುಂದಿನ ವಾರ ದೆಹಲಿಗೆ ತೆರಳಲಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಬೇಕಿದೆ. ಈ ಸಂದರ್ಭದಲ್ಲಿ ಅದಕ್ಕೆ ಪೂರಕವಾಗಿ ಇಡೀ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳ ಬಗ್ಗೆ ಸಭೆ ಕರೆಯಲಾಗುವುದು. ಆದ್ಯತೆ ಮೇರೆಗೆ ಮಂಗಳೂರು- ಬೆಂಗಳೂರು ಹೆದ್ದಾರಿ ದುರಸ್ತಿ ಕೆಲಸಗಳಾದ ಸುರಂಗ ಮಾರ್ಗ, ವೈಟ್ ಟಾಪಿಂಗ್ ಮುಂತಾದ ಕೆಲಸ ಕೈಗೆತ್ತಿಕೊಳ್ಳಲಾಗುವುದು. ಅಲ್ಪಾವಧಿ ಕಾಮಗಾರಿಯಲ್ಲಿ ರಸ್ತೆಯಲನ್ನು ಬಳಕೆಗೆ ಯೋಗ್ಯವಾಗಿಸುವುದು ಹಾಗೂ ದೀರ್ಘಾವಧಿ ಕಾಮಗಾರಿ ಗಳಲ್ಲಿ ಸುರಂಗ ಮಾರ್ಗ ನಿರ್ಮಾಣ ಕೈಗೊಳ್ಳಲಾಗುವುದು ಎಂದರು.
























































