ಮಂಗಳೂರು: ಬಿಜೆಪಿಯ ಭದ್ರಕೋಟೆ ಎನಿಸಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಡಿತ ಸಾಧಿಸುವ ಕಾಂಗ್ರೆಸ್ ಪ್ರಯತ್ನ ವಿಫಲವಾಗಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ರುಚಿ ಸೋಲಿಸಲು ಕಾಂಗ್ರೆಸ್ ಶತಪ್ರಯತ್ನ ಮಾಡಿತ್ತು. ಆದರೆ ಬಿಜೆಪಿಯ ದಿಗ್ವಿಜಯದ ಯಾತ್ರೆಯನ್ನು ತಡೆಯಲು ಸಾಧ್ಯವಾಗಿಲ್ಲ.
ಲೋಕಸಭಾ ಚುನಾವಣಾ ಅಖಾಡದಲ್ಲಿ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿತ್ತು. ಮಂಗಳವಾರ ಮತ ಎಣಿಕೆಯುದ್ದಕ್ಕೂ ಮುನ್ನಡೆ ಸಾಧಿಸುತ್ತಾ ಬಂದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ವಿರುದ್ಧ ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ದಿಗ್ವಿಜಯ ಸಾಧಿಸಿದ್ದಾರೆ.






















































