ಮಂಗಳೂರು: ಸಿನಿಮೀಯ ರೀತಿಯಲ್ಲಿ ಕಳ್ಳನನ್ನು ಪೊಲೀಸರು ಹಿಡಿದಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿ ಮುಂಭಾಗ ಇರುವ ನೆಹರೂ ಮೈದಾನದಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಹಾಗೂ ಹಣವನ್ನು ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಪೊಲೀಸ್ ಸಿಬ್ಬಂದಿ ಸಿನಿಮೀಯ ರೀತಿ ಬೇಟೆ ಕೈಗೊಂಡು ಸೆರೆಹಿಡಿದಿದ್ದಾರೆ. ಈ ವೀಡಿಯೋ ಇದೀಗ ವೈರಲ್ ಆಗಿದೆ.
ಆದರೆ, ಪೊಲೀಸರ ಯುಕ್ತಿ ಗೊತ್ತಾಗಿ ಆರೋಪಿಗಳು ಎಸ್ಕೇಪ್ ಆಗಲು ಯತ್ನಿಸಿದರು. ಈ ವೇಳೆ ಸುಮಾರು ಒಂದು ಕಿಲೋಮೀಟರ್ ನಷ್ಟು ದೂರ ಓಡಿ ಕಳ್ಳನನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆ ಬಳಿಕ ಇನ್ನಿಬ್ಬರೂ ʼಪೊಲೀಸ್ ಬಲೆʼಗೆ ಬಿದ್ದಿದ್ದಾರೆ. ಈ ಕಾರ್ಯಾಚರಣೆಯ ದೃಶ್ಯ ವೈರಲ್ ಆಗಿದೆ. ಸಿನಿಮೀಯ ರೀತಿ ಬೆನ್ನಟ್ಟಿ ಪೊಲೀಸರನ್ನು ಸೆರೆಹಿಡಿದ ಪೊಲೀಸರ ಸಾಹಸವೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.