ಮಂಗಳೂರು: ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಪ್ರಮುಖ್ ಮಹಮ್ಮದ್ ಫಾರೂಕ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಕಚೇರಿಯ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದ ಆರೋಪ ಕುರಿತಂತೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ದಕ್ಷಿಣ ಕನ್ನಡ ಜಿಲ್ಲಾ ವ್ಯವಸ್ಥಾಪಕ ಮಹಮ್ಮದ್ ಫಾರೂಕ್ ವಿರುದ್ದ ಪ್ರಕರಣ ದಾಖಲಾಗಿತ್ತು.
ಈ ಕುರಿತಂತೆ ತನಿಖೆ ನಡೆಸುತ್ತಿರುವ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು ಮಹಮ್ಮದ್ ಫಾರೂಕ್ ಅವರನ್ನು ಬಂಧಿಸಿದ್ದಾರೆ.