ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಚುನಾವಣಾ ಅಖಾಡ ಹಠಾತ್ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ. ಕಾಂಗ್ರೆಸ್ ಪಕ್ಷವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದಲ್ಲಿ ಕಾರ್ಯಕರ್ತರೇ ಮುನಿಸಿಕೊಂಡಿದ್ದಾರೆ. ಬಿಜೆಪಿ ಜತೆಗಿನ ಮೈತ್ರಿ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮಂಗಳೂರಿನಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಜೆಡಿಎಸ್ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರು ಈ ನಾಯಕರನ್ನು ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.