ಮಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎರಡು ವಾರಗಳ ಕಾಲ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. ಬುಧವಾರ ರಾತ್ರಿ ಕರ್ಫ್ಯೂ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದರು.
ವಾರಾಂತ್ಯದ ಕರ್ಫ್ಯೂ ನಾಳೆ ರಾತ್ರಿಯಿಂದಲೇ ಜಾರಿಗೆ ಬರಲಿದ್ದು ಸರ್ಕಾರದ ಆದೇಶವನ್ನು ಪರಿಣಾಮಕಾರೊಯಾಗಿ ಜಾರಿಗೊಳಿಸಲು ಪೊಲೀಸರು ಸಿದ್ದತೆ ನಡೆಸಿದ್ದಾರೆ.
ಈ ನಡುವೆ, ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಶನಿವಾರ ಹಾಗೂ ಭಾನುವಾರ ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಖಾಸಗಿ ಬಸ್‌ಗಳ ಸಂಚಾರ ಇರುವುದಿಲ್ಲ ಎಂದು ಕೆನರಾ ಬಸ್ ಮಾಲೀಕರ ಸಂಘ ತಿಳಿಸಿದೆ. ಸೋಮವಾರದಿಂದ ಶುಕ್ರವಾರದವರೆಗೆ ಬಸ್‌ಗಳು ಯಥಾಸ್ಥಿತಿ ಸಂಚರಿಸಲಿದೆ. ಆದರೆ ಶನಿವಾರ ಹಾಗೂ ರವಿವಾರ ಯಾವುದೇ ಬಸ್‌ಗಳು ಸಂಚರಿಸುವುದಿಲ್ಲ ಎಂದು ಕೆನರಾ ಬಸ್ ಮಾಲಕರ ಸಂಘದ ಪದಾಧಿಕಾರಿ ಸುರೇಶ್ ನಾಯಕ್ ತಿಳಿಸಿದ್ದಾರೆ.