ಮಂಗಳೂರು: ಹೊಸದಿಗಂತ ಪತ್ರಿಕೆಯ ವರದಿಗಾರ, ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ವಿಧಿವಶರಾಗಿದ್ದಾರೆ. ಕೆಲ ಸಮಯದಿಂದ ಅಸೌಖ್ಯದಿಂದ ಇದ್ದ ಅವರು ಭಾನುವಾರ ನಿಧನರಾಗಿದ್ದಾರೆ.
ಮಂಗಳೂರು ಮಿತ್ರ, ಕರಾವಳಿ ಅಲೆ ಪತ್ರಿಕೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದ ಅವರು, ಸುಮಾರು ಎರಡೂವರೆ ದಶಕಗಳಿಂದ ಹೊಸದಿಗಂತ ಪತ್ರಿಕೆಯ ಮಂಗಳೂರು ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಕ್ರಿಯಾಶೀಲ ಬರಹಗಾರರಾಗಿದ್ದ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸಹಿತ ಅನೇಕ ಪುರಸ್ಕಾರಗಳನ್ನು ಪಡೆದಿದ್ದಾರೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಅವರು ಸೇವೆ ಸಲ್ಲಿಸಿದ್ದಾರೆ.